ಬೆಂಗಳೂರು: ಶೀಘ್ರವೇ ರಾಹುಲ್ ಗಾಂಧಿಗೆ ಸಿದ್ದು ಸ್ಕ್ಯಾಂ ದಾಖಲೆಗಳನ್ನು ರವಾನಿಸಲಾಗುವುದು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಸದ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು, ರಾಹುಲ್ ಗಾಂಧಿ ಅಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ’ ಅಂತಾ ಟೀಕಿಸಿದ್ದಾರೆ.
‘ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿಯವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ಮೋದಿ ಮತ್ತು ನೀವು ಪ್ರಧಾನಿ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ. ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲವೆಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಬೊಮ್ಮಾಯಿಯವರೇ, ವಿಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಸಿಎಂ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ’ ಎಂದು ಕುಟುಕಿದ್ದಾರೆ.
ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ @RahulGandhi ಅವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ @narendramodi ಮತ್ತು ನೀವು @PMOIndia ಮತ್ತು @CMofKarnataka ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ.
2/8#PayCM— Siddaramaiah (@siddaramaiah) October 19, 2022
ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ @BSBommai ಅವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ.
3/8#PayCM— Siddaramaiah (@siddaramaiah) October 19, 2022
ಇದನ್ನೂ ಓದಿ: ನ.11ಕ್ಕೆ ಪ್ರಧಾನಿ ಮೋದಿಯಿಂದ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಲೋಕಾರ್ಪಣೆ
‘ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆ. ನಮ್ಮ ನಾಯಕ ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರವಿಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ‘ಆಪರೇಷನ್ ಕಮಲ’ದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲ’ವೆಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ನಮ್ಮ ನಾಯಕರಾದ @RahulGandhi ಅವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ಆಪರೇಷನ್ ಕಮಲದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲ @BSBommai.
5/8#PayCM— Siddaramaiah (@siddaramaiah) October 19, 2022
ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ. ನಿಮ್ಮ ಧಮ್ –ತಾಖತ್ ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು ಆರ್ ಎಸ್ ಎಸ್ ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು @BSBommai.
6/8#PayCM— Siddaramaiah (@siddaramaiah) October 19, 2022
‘ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ. ನಿಮ್ಮ ಧಮ್–ತಾಖತ್ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಸಿಎಂ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು RSS ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು. ಸಾರ್ವಜನಿಕ ಸಭೆಗಳಲ್ಲಿ ವಿಪಕ್ಷದ ವಿರುದ್ಧ ಅಬ್ಬರಿಸುತ್ತಿರುವ ನಿಮಗೆ, ನೀವು 2,500 ಕೋಟಿ ರೂ. ದುಡ್ಡು ಕೊಟ್ಟು ಮುಖ್ಯಮಂತ್ರಿಯಾಗಿದ್ದೀರಿ ಎಂದು ಆರೋಪ ಮಾಡುತ್ತಿರುವ ನಿಮ್ಮದೇ ಪಕ್ಷದ ಒಬ್ಬ ಶಾಸಕನ ವಿರುದ್ಧ ಸೊಲ್ಲೆತ್ತುವ ಧೈರ್ಯ ಇಲ್ಲ. ಇದೆಂತಹ ನಿಮ್ಮ ಹೇಡಿತನ’ ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಾಯಕರ ಬಗ್ಗೆ @RahulGandhi ಅವರಿಂದಲೇ ನೀವು ತನಿಖೆ ಮಾಡಿಸುವುದಾದರೆ @DKShivakumar ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ @BSBommai.
8/8#PayCM— Siddaramaiah (@siddaramaiah) October 19, 2022
ಇದನ್ನೂ ಓದಿ: ಪೇ ಸಿಎಂ ನಂತರ SayCM.com ಪ್ರಾರಂಭಿಸಿದ ಕರ್ನಾಟಕ ಕಾಂಗ್ರೆಸ್
‘ಕಾಂಗ್ರೆಸ್ ನಾಯಕರ ಬಗ್ಗೆ ರಾಹುಲ್ ಗಾಂಧಿಯವರಿಂದಲೇ ನೀವು ತನಿಖೆ ಮಾಡಿಸುವುದಾದರೆ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ’ ಅಂತಾ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ