Indian Team For T20 World Cup 2022 : ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲು ಭಾರತ ತಂಡವು ಪ್ರಸ್ತುತ ಆಸ್ಟ್ರೇಲಿಯಾವನ್ನು ತಲುಪಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ 6 ರನ್‌ಗಳಿಂದ ರೋಚಕವಾಗಿ ಗೆಲುವು ಸಾಧಿಸಿದೆ. ಈ ನಡುವೆ ಟೀಂ ಇಂಡಿಯಾಗೆ ಒಂದು ಸಿಹಿ ಸುದ್ದಿ ಹೊರಬಿದ್ದಿದೆ. ಫಿಟ್ ಆಗಿರುವ ಭಾರತದ ಸ್ಟಾರ್ ಕ್ರಿಕೆಟಿಗ ಟೀಂ ಇಂಡಿಯಾಗೆ ಮರಳಲು ಸಿದ್ಧವಾಗಿದ್ದಾನೆ. ಹಾಗಿದ್ರೆ ಈ ಆಟಗಾರ ಯಾರು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..
ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಆಟಗಾರ
ಭಾರತ ತಂಡದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಗಾಯದ ಸಮಸ್ಯೆಯಿಂದಾಗಿ 2022 ರ ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಇದರ ನಂತರ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಪ್ರಕ್ರಿಯೆಯ ಮೂಲಕ ಹೋಗುತ್ತಿದ್ದಾರೆ. ಏಷ್ಯಾಕಪ್‌ನಲ್ಲೂ ಅವರು ಕೇವಲ ಎರಡು ಪಂದ್ಯಗಳನ್ನು ಆಡಿ ಔಟಾಗಿದ್ದರು. ಕಳೆದ ತಿಂಗಳು ಅವರಿಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿತ್ತು. ಇದೀಗ ಅವರ ಬಗ್ಗೆ ಭರ್ಜರಿ ಸುದ್ದಿ ಹೊರಬೀಳುತ್ತಿದೆ. ಗಾಯದಿಂದ ಚೇತರಿಸಿಕೊಂಡಿದ್ದಾರೆ.
ಇದನ್ನೂ ಓದಿ : BCCI vs PCB : ಜಯ್ ಶಾ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ ಪಾಕ್ ಕ್ರಿಕೆಟ್ ಮಂಡಳಿ!
ಈ ವಿಡಿಯೋ ಶೇರ್ ಮಾಡಿದ ಜಡೇಜಾ
ರವೀಂದ್ರ ಜಡೇಜಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ರನ್ನಿಂಗ್ ಮಾಡುತ್ತಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ನನಗೆ ಸಹಕಾರ ನೀಡಿದ ನನ್ನ ಎಲ್ಲ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಿಸಿಸಿಐ, ನನ್ನ ಸಹೋದ್ಯೋಗಿಗಳು, ಸಹಾಯಕ ಸಿಬ್ಬಂದಿ, ಫಿಸಿಯೋ, ವೈದ್ಯರು ಮತ್ತು ಅಭಿಮಾನಿಗಳು. ನಿಮ್ಮ ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಟೀಂ ಇಂಡಿಯಾಗಾಗಿ ಮೂರು ಮಾದರಿಗಳಲ್ಲಿ ಆಡಿದ್ದಾರೆ ಜಡೇಜಾ
ರವೀಂದ್ರ ಜಡೇಜಾ ಭಾರತ ತಂಡಕ್ಕೆ ಹಲವು ಪಂದ್ಯಗಳನ್ನು ಸ್ವಂತ ಬಲದಿಂದ ಗೆದ್ದುಕೊಟ್ಟಿದ್ದಾರೆ. ಅವರು ಟೀಮ್ ಇಂಡಿಯಾ ಪರ ಎಲ್ಲಾ ಮೂರು ಮಾದರಿಗಳಲ್ಲಿ ಕ್ರಿಕೆಟ್ ಆಡಿದ್ದಾರೆ. ಅವರು ತಮ್ಮ ಕಿಲ್ಲರ್ ಬೌಲಿಂಗ್ ಮತ್ತು ಚಾಣಾಕ್ಷ ಬ್ಯಾಟಿಂಗ್‌ನಲ್ಲಿ ಪರಿಣತಿ ಹೊಂದಿದ್ದಾರೆ. ಜಡೇಜಾ ಭಾರತ ಪರ 60 ಟೆಸ್ಟ್ ಪಂದ್ಯಗಳು, 171 ODIಗಳು ಮತ್ತು 64 T20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಪರ 242 ವಿಕೆಟ್ ಪಡೆದಿದ್ದಾರೆ.
ಇದನ್ನೂ ಓದಿ : Rishab Pant: ಪಾಕ್ ವಿರುದ್ದದ ಪಂದ್ಯಕ್ಕೂ ಮುನ್ನ ಗಾಯಗೊಂಡ ಪಂತ್? ಭಯ ಹುಟ್ಟಿಸುತ್ತಿದೆ ಈ ಫೋಟೋಗಳು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.