ಬೆಂಗಳೂರು : ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ‘ನನ್ನಮ್ಮ ಸೂಪರ್ ಸ್ಟಾರ್’ ಪ್ರೇಕ್ಷಕರನ್ನು ರಂಜಿಸಿದ್ದು ಗೊತ್ತೇ ಇದೆ. ಮೊದಲ ಸೀಸನ್ ಮೆಗಾ ಹಿಟ್ ಬಳಿಕ ಸೀಸನ್ 2 ಮೂಲಕ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲು ಇಡೀ ತಂಡ ಸಜ್ಜಾಗಿದೆ. ಈಗಾಗಲೇ ‘ನನ್ನಮ್ಮ ಸೂಪರ್ ಸ್ಟಾರ್ ಸೀಸನ್ 2’ ಗ್ರ್ಯಾಂಡ್ ಒಪನಿಂಗ್ ಕೂಡ ಆಗಿದೆ. ಮೊದಲ ಸೀಸನ್ ನಲ್ಲಿ ಸೆಲೆಬ್ರೆಟಿ ತಾಯಿ ಮಕ್ಕಳಿಂದ ಕೂಡಿದ್ದ ಈ ಶೋ, ಈ ಬಾರಿ ಸೆಲೆಬ್ರೆಟಿಗಳ ಜೊತೆ ಸಾಮಾನ್ಯ ಜನರನ್ನು ಒಳಗೊಂಡಿದೆ. ಅಕ್ಟೋಬರ್ 15ರಂದು ನನ್ನಮ್ಮ ಸೂಪರ್ ಸ್ಟಾರ್ ಸೀಸನ್ 2 ಗ್ರ್ಯಾಂಡ್ ಒಪನಿಂಗ್ ಆಗಿದ್ದು, ಎರಡು ಎಪಿಸೋಡ್ ಗಳು ಪ್ರಸಾರವಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಸ್ಪೆಷಲ್ ಎಪಿಸೋಡ್ ಚಿತ್ರೀಕರಣದಲ್ಲಿ ತಂಡ ಬ್ಯುಸಿಯಾಗಿದ್ದು, ಹಬ್ಬದ ಸಡಗರ ಹೆಚ್ಚಿಸಲು ಅಮ್ಮ ಮಕ್ಕಳ 12 ಹೊಸ ಜೋಡಿಗಳು ರೆಡಿಯಾಗಿದ್ದಾರೆ.
‘ನನ್ನಮ್ಮ ಸೂಪರ್ ಸ್ಟಾರ್’ ಕಿರುತೆರೆ ಪ್ರೇಕ್ಷಕರಿಗೆ ಹೊಸ ಅನುಭವ ನೀಡಿದೆ. ಸೀರಿಯಲ್ ನಡುವೆ ಈ ಶೋ ಹೊಸ ಬಗೆಯ ಕಾನ್ಸೆಪ್ಟ್ ನೊಂದಿಗೆ ಮನೆ ಮಂದಿಗೆಲ್ಲ ರಂಜನೆ ನೀಡಿತ್ತು. ತಾಯಿ ಮಕ್ಕಳ ಆಟ, ನಗು, ಅಳು, ತಮಾಷೆ ವೀಕ್ಷಕರ ಮನಗೆದ್ದಿತ್ತು. ಕಾರ್ಯಕ್ರಮವೂ ಜನಪ್ರಿಯವಾಗಿತ್ತು. ಆ ಯಶಸ್ಸಿನ ಬೆನ್ನಲ್ಲೇ ಸೀಸನ್ 2 ಆರಂಭವಾಗಿದೆ. ಈ ಬಾರಿ ನಿರಂಜನ್ ದೇಶಪಾಂಡೆ ಕಾರ್ಯಕ್ರಮ ನಿರೂಪಣೆ ಮಾಡಲಿದ್ದು, ಇವರ ಜೊತೆಗೆ ಮೊದಲ ಸೀಸನ್ ವಿನ್ನರ್ ವಂಶಿಕಾ ನಿರೂಪಕಿಯಾಗಿ ರಂಜಿಸಲಿದ್ದಾರೆ. ಹಿಂದಿನಂತೆ ಈ ಸೀಸನ್ ನಲ್ಲಿಯೂ ನಟಿ ತಾರಾ, ಅನು ಪ್ರಭಾಕರ್ ಹಾಗೂ ಸೃಜನ್ ಲೋಕೇಶ್ ತೀರ್ಪುದಾರರಾಗಿರಲಿದ್ದಾರೆ.
ಇದನ್ನೂ ಓದಿ : BBK9 : ಬಿಗ್ ಬಾಸ್ ಈ ವಾರಾಂತ್ಯದ ಸಂಚಿಕೆಗೆ ಕಿಚ್ಚ ಸುದೀಪ್ ಗೈರು?
ಮಕ್ಕಳ ಮುಗ್ದತೆಯನ್ನು ಇಟ್ಟುಕೊಂಡು ಮನರಂಜನೆ ನೀಡುವ ಕಾರ್ಯಕ್ರಮ. ಬುದ್ದಿವಂತಿಕೆ, ಪ್ರತಿಭೆಗಿಂತ ಮಕ್ಕಳ ಮುಗ್ಧತೆಯೇ ಈ ಕಾರ್ಯಕ್ರಮದ ಕೇಂದ್ರ ಬಿಂದು. ಮೊದಲ ಸೀಸನ್ ದೊಡ್ಡ ಮಟ್ಟದಲ್ಲಿ ಹಿಟ್ ಆದ ಕಾರಣದಿಂದ ಸೀಸನ್ 2 ಆರಂಭವಾಗಿದೆ. ಈ ಕಾರ್ಯಕ್ರಮ ಕೂಡ ಸಕ್ಸಸ್ ಆಗಲಿದೆ ಎಂಬ ಭರವಸೆ ಕಲರ್ಸ್ ಕನ್ನಡದ ಪ್ರೋಗ್ರಾಮ್ ಹೆಡ್ ಪ್ರಕಾಶ್ ಅವರದ್ದು.
ಲೋಕೇಶ್ ಪ್ರೊಡಕ್ಷನ್ ಬ್ಯಾನರ್ ನಡಿ ಈ ಕಾರ್ಯಕ್ರಮ ನಿರ್ಮಾಣವಾಗುತ್ತಿದೆ. ಈ ಬಗ್ಗೆ ಮಾತನಾಡಿದ ನಟ ಸೃಜನ್ ಲೋಕೇಶ್, ನಾನು ಪ್ರೊಡಕ್ಷನ್ ಮಾಡಿರಬಹುದು, ಆದರೆ, ಒಂದು ತಂಡವಾಗಿ ಗೆದ್ದಿದ್ದೇವೆ. ನನ್ನಮ್ಮ ಸೂಪರ್ ಸ್ಟಾರ್, ರಾಜಾ ರಾಣಿ, ಗಿಚ್ಚಿ ಗಿಲಿ ಗಿಲಿ ಶೋ ಇದೆಲ್ಲದರ ಗೆಲುವಿಗೆ ಡೈರೆಕ್ಷನ್ ತಂಡ ಕಾರಣ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ "ಬನಾರಸ್" ಪ್ರೀ ರಿಲೀಸ್ ಇವೆಂಟ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.