ಡ್ರಿಪ್‍ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್, ಡೆಂಗ್ಯೂ ರೋಗಿ ಸಾವು..!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ‘ಡೆಂಗ್ಯೂ ರೋಗಿಗೆ ನಕಲಿ ಪ್ಲಾಸ್ಮಾ ಪೂರೈಕೆ ಪ್ರಕರಣ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ.

Written by - Puttaraj K Alur | Last Updated : Oct 21, 2022, 03:47 PM IST
  • ಡ್ರಿಪ್‍ನಲ್ಲಿ ರಕ್ತದ ಬದಲಿಗೆ ಮೊಸಂಬಿ ಜ್ಯೂಸ್ ಹಾಕಿದ್ದರಿಂದ ಡೆಂಗ್ಯೂ ರೋಗಿ ಸಾವು
  • ಉತ್ತರಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ಮಾನವೀಯತೆಯೇ ತಲೆತಗ್ಗಿಸುವ ಘಟನೆ
  • ಮೊಸಂಬಿ ಜ್ಯೂಸ್‍ ನೀಡಿದವರ ವಿರುದ್ಧ ಕಠಿಣ ಕ್ರಮವೆಂದ ಯುಪಿ ಡಿಸಿಎಂ ಬ್ರಜೇಶ್ ಪಾಠಕ್
ಡ್ರಿಪ್‍ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್, ಡೆಂಗ್ಯೂ ರೋಗಿ ಸಾವು..! title=
ಡ್ರಿಪ್‍ನಲ್ಲಿ ರಕ್ತದ ಬದಲಿಗೆ ಮೊಸಂಬಿ ಜ್ಯೂಸ್!

ಲಕ್ನೋ: ಡ್ರಿಪ್‍ನಲ್ಲಿ ರಕ್ತದ ಬದಲಿಗೆ ಮೊಸಂಬಿ ಜ್ಯೂಸ್ ಹಾಕಿದ್ದರಿಂದ ಡೆಂಗ್ಯೂ ರೋಗದಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ರಕ್ತದ ಡ್ರಿಪ್ ಬದಲಿಗೆ ಮೊಸಂಬಿ ಜ್ಯೂಸ್ ಹಾಕಿರುವುದನ್ನು ಕಾಣಬಹುದಾಗಿದೆ. ಮೃತನ ಕುಟುಂಬಸ್ಥರ ಆರೋಪದ ಮೇರೆಗೆ ಇದೀಗ ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಇನ್ಸ್‌ಪೆಕ್ಟರ್ ಜನರಲ್ ರಾಕೇಶ್ ಸಿಂಗ್, ‘ಪ್ರಯಾಗ್‍ರಾಜ್‍ನ ಝಲ್ವಾ ಪ್ರದೇಶದಲ್ಲಿ ಡೆಂಗ್ಯೂ ರೋಗಿಗಳಿಗೆ ನಕಲಿ ಪ್ಲಾಸ್ಮಾ ಸರಬರಾಜು ಮಾಡಲಾಗುತ್ತಿದೆ ಅನ್ನೋದರ ಬಗ್ಗೆ ಪರಿಶೀಲನೆ ನಡೆಸಲು ತನಿಖಾ ತಂಡ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದ ಬೆಣ್ಣೆ ಇಡ್ಲಿ ಖ್ಯಾತಿಯ ದರಸಗುಪ್ಪೆ ಹೋಟೇಲ್ ಶಿವಪ್ಪ ನಿಧನ

ಪ್ರಯಾಗ್‍ರಾಜ್‍ನ ಝಲ್ವಾ ಪ್ರದೇಶದ ಗ್ಲೋಬಲ್ ಆಸ್ಪತ್ರೆಯಲ್ಲಿ ಆಗುತ್ತಿರುವ ವಂಚನೆ ಕುರಿತು ವ್ಯಕ್ತಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವೈದ್ಯರು ರಕ್ತದ ಪ್ಲಾಸ್ಮಾ ಅಗತ್ಯವಿರುವ ರೋಗಿಗಳಿಗೆ ನೀಡುವ ಡ್ರಿಪ್‍ನಲ್ಲಿ ಮೊಸಂಬಿ ಜ್ಯೂಸ್ ಹಾಕುತ್ತಿದ್ದಾರೆ’ ಅಂತಾ ಅವರು ಆರೋಪಿಸಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಡೆಂಗ್ಯೂ ರೋಗಿಗೆ ನೀಡಿದ್ದ ರಕ್ತದ ಪ್ಯಾಕ್ ಅನ್ನು ಹಿಡಿದುಕೊಂಡಿದ್ದು, ಅದನ್ನು ಹಿಂತಿರುಗಿಸಿ ತೋರಿಸಿದಾಗ ಅದರಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ಇರುವುದನ್ನು ನೀವು ಕಾಣಬಹುದಾಗಿದೆ.

Vedank Singh ಎಂಬುವರು ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಪ್ರಯಾಗ್‍ರಾಜ್‍ನಲ್ಲಿ ಮಾನವೀಯತೆಯೇ ತಲೆತಗ್ಗಿಸುವ ಘಟನೆ ನಡೆದಿದೆ. ಝಲ್ವಾದ ಗ್ಲೋಬಲ್ ಆಸ್ಪತ್ರೆಯು ಡೆಂಗ್ಯೂ ರೋಗಿ ಪ್ರದೀಪ್ ಪಾಂಡೆಗೆ ಪ್ಲೇಟ್‌ಲೆಟ್ ಬದಲಿಗೆ ಮೊಸಂಬಿ ಜ್ಯೂಸ್ ನೀಡಿದೆ ಎಂದು ಕುಟುಂಬವೊಂದು ಆರೋಪಿಸಿದೆ. ರೋಗಿಯು ಸಾವನ್ನಪ್ಪಿದ್ದಾನೆ. ದಯವಿಟ್ಟು ಈ ವಿಷಯವನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಿ’ ಅಂತಾ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಲಿಂಗಕಾಮಿ ವಿದ್ಯಾರ್ಥಿನಿಯರ ನಡುವೆ ಫೈಟ್; ಬ್ಲೇಡ್​ನಿಂದ ಕತ್ತು ಕೊಯ್ದ ಗೆಳತಿ..!

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ‘ಡೆಂಗ್ಯೂ ರೋಗಿಗೆ ನಕಲಿ ಪ್ಲಾಸ್ಮಾ ಪೂರೈಕೆ ಪ್ರಕರಣ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ನಾವು ಈಗಾಗಲೇ ತನಿಖೆ ನಡೆಸಲು ತಂಡವನ್ನು ರಚಿಸಿದ್ದು, ಸ್ಥಳಕ್ಕೆ ಕಳುಹಿಸಿದ್ದೇವೆ. ಕೆಲವೇ ಗಂಟೆಗಳಲ್ಲಿ ವರದಿ ಸಲ್ಲಿಕೆಯಾಗಲಿದೆ. ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಅಂತಾ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News