ಬೆಂಗಳೂರು : ಕುಡಿದ ಅಮಲಿನಲ್ಲಿ ಜೊತೆಗಿದ್ದವನನ್ನೆ ಪಾಪಿಯೊಬ್ಬ ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮುಖೇಶ್(35) ಎಂಬಾತನೇ ಕೊಲೆಯಾದ ವ್ಯಕ್ತಿ. ನಿಖಿಲ್ ಕೊಲೆ ಆರೋಪಿಯಾಗಿದ್ದಾನೆ.
ಈ ಇಬ್ಬರೂ ಬಿಹಾರದಿಂದ ಬೆಂಗಳೂರಿಗೆ ಕೆಲಸ ಅರಸಿ ಬಂದಿದ್ದರು. ಒಟ್ಟಿಗೆ ಟೈಲ್ಸ್ ಕೆಲಸ ಮಾಡಿಕೊಂಡಿದ್ದರು. ಆಗಾಗ ಇಬ್ಬರ ನಡುವೆ ಸಣ್ಣಪುಟ್ಟ ಕಾರಣಗಳಿಗೆ ಜಗಳವಾಗುತ್ತಿತ್ತು. ಹೀಗೆ ಯಲಚೇನಹಳ್ಳಿ ಬಳಿಯ ಕಾಶಿನಗರ ಸರ್ಕಲ್ನಲ್ಲಿ ಬಿಲ್ಡಿಂಗ್ ಕಾಮಗಾರಿ ನಡೆದಿತ್ತು. ಇಬ್ಬರು ಅಲ್ಲಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಇಬ್ಬರು ಮದ್ಯ ಸೇವನೆ ಮಾಡಿ ಮಾತನಾಡಲು ಆರಂಭಿಸಿದ್ದರು.
ಇದನ್ನೂ ಓದಿ: ʼಮಗಳ ಗೆಳೆಯನಿಂದ ಗರ್ಭಿಣಿಯಾದ ತಾಯಿʼ : ಲವ್ ಧೋಕಾ ಕಹಾನಿ ವೈರಲ್
ಈ ವೇಳೆ ಮುಖೇಶ್ ಹಾಗೂ ನಿಖಿಲ್ ನಡುವೆ ಮಾತಿಗೆ ಮಾತು ಬೆಳೆದಿದೆ. ಮೊದಲೇ ಕುಡಿದ ಅಮಲಿನಲ್ಲಿದ್ದ ಇಬ್ಬರಿಗೂ ಮೈಮೇಲೆ ಪ್ರಜ್ಞೆ ಇರಲಿಲ್ಲ. ಜಗಳದ ಮಧ್ಯೆ ನಿಖಿಲ್ ನಿರ್ಮಾಣ ಹಂತದ ಬಿಲ್ಡಿಂಗ್ನಲ್ಲಿದ್ದ ದೊಣ್ಣೆ ತೆಗೆದುಕೊಂಡು ಮುಖೇಶ್ ತಲೆಗೆ ಹೊಡೆದಿದ್ದಾನೆ. ಹೀಗಾಗಿ ಸ್ಥಳದಲ್ಲೇ ಕುಸಿದ ಬಿದ್ದ ಮುಖೇಶ್ ತೀವ್ರ ರಸ್ತಸ್ರಾವದಿಂದ ಮೃತಪಟ್ಟಿದ್ದಾನೆ. ಸಧ್ಯ ಆರೋಪಿ ನಿಖಿಲ್ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಬಲೆ ಬೀಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ