ಚಾಮರಾಜನಗರ: ಸಮಸ್ಯೆ ಹೇಳಲು ಬಂದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮಸ್ಯೆ ಹೇಳಲು ಬಂದ ಮಹಿಳೆಯ ಕಪಾಳಕ್ಕೆ ಸಚಿವ ಸೋಮಣ್ಣ ಹೊಡೆದಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಆಗಿದ್ದೇನು..?
ಶನಿವಾರ ಸಂಜೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಕೆಂಪಮ್ಮ ಎಂಬ ಮಹಿಳೆ ಸಮಸ್ಯೆ ಹೇಳಿಕೊಳ್ಳಲು ವೇದಿಕೆ ಮೇಲೆ ಬಂದಿದ್ದರು. ನಿವೇಶನದ ಹಕ್ಕು ಪತ್ರ ಸಿಗದ ಹಿನ್ನಲೆ ಬೇಸತ್ತಿದ್ದ ಮಹಿಳೆ ಏರು ಧ್ವನಿಯಲ್ಲಿ ಸಚಿವರನ್ನು ಪ್ರಶ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಸೋಮಣ್ಣ ಮಹಿಳೆಯ ಕಪಾಳಕ್ಕೆ ಬಾರಿಸಿದ್ದಾರೆ. ಕಪಾಳಕ್ಕೆ ಹೊಡೆದರೂ ಮಹಿಳೆ ಸಚಿವರ ಕಾಲಿಗೆ ನಮಸ್ಕಾರ ಮಾಡಿದ್ದಾಳೆ.
ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ರಾಜ್ಯ ಕುರುಬರ ಸಂಘದ ನಿರ್ದೇಶಕ ಪಿ.ರಾಜಕುಮಾರ ನಿಧನ
ಈ ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕಾಪಾಳ ಮೋಕ್ಷ ಮಾಡಿದ ಬಳಿಕ ಸಚಿವ ಸೋಮಣ್ಣ ಪೊಲೀಸರನ್ನು ಕರೆದು ಆಕೆಯನ್ನು ಕರದುಕೊಂಡು ಹೋಗುವಂತೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಮಸ್ಯೆ ಹೇಳಲು ಬಂದ ಮಹಿಳೆಗೆ ಸಚಿವರು ಈ ರೀತಿ ಗೌರವ ನೀಡೋದಾ? ಅಂತಾ ವಿಪಕ್ಷ ನಾಯಕರು ಮತ್ತು ನೆಟಿಜನ್ಸ್ ಪ್ರಶ್ನಿಸಿದ್ದಾರೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನಗರಸಭೆ ಸದಸ್ಯರಿಗೆ ಚಿನ್ನ, ಬೆಳ್ಳಿ, 1 ಲಕ್ಷ ರೂ. ನಗದು: ದೀಪಾವಳಿಗೆ ಸಚಿವ ಆನಂದ್ ಸಿಂಗ್ ಭರ್ಜರಿ ಗಿಫ್ಟ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ