Virat Kohli Records: ಆಸ್ಟ್ರೇಲಿಯಾ ನೆಲದಲ್ಲಿ ಕೊಹ್ಲಿಯದ್ದೇ ಕಾರಿಬಾರು: ಈ ದಾಖಲೆ ಮುರಿಯಲು ಸಾಧ್ಯವೇ!

ಯುಎಇಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2022 ಏಷ್ಯಾಕಪ್‌ನಲ್ಲಿ ಕೊಹ್ಲಿ 147.59 ಸ್ಟ್ರೈಕ್ ರೇಟ್‌ನಲ್ಲಿ 276 ರನ್ ಗಳಿಸಿದ್ದರು. ಕೊಹ್ಲಿ ಎರಡು ಅರ್ಧ ಶತಕ ಹಾಗೂ ಮೊದಲ ಟಿ20 ಶತಕ ಬಾರಿಸಿದರು. ಈ ಮೂಲಕ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ನಂತರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ.

Written by - Bhavishya Shetty | Last Updated : Oct 23, 2022, 01:21 PM IST
    • ಆಸ್ಟ್ರೇಲಿಯಾದ ನಾಡಲ್ಲಿ ಭಾರತ ಪಾಕಿಸ್ತಾನ ತಂಡ ಮುಖಾಮುಖಿ
    • 2021ರ ಸೇಡನ್ನು ತೀರಿಸಿಕೊಳ್ಳಲು ಟೀಂ ಇಂಡಿಯಾ ಕಾತುರ
    • ಇನ್ನು ಈ ನೆಲದಲ್ಲಿ ವಿರಾಟ್ ಕೊಹ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಾರೆ
Virat Kohli Records: ಆಸ್ಟ್ರೇಲಿಯಾ ನೆಲದಲ್ಲಿ ಕೊಹ್ಲಿಯದ್ದೇ ಕಾರಿಬಾರು: ಈ ದಾಖಲೆ ಮುರಿಯಲು ಸಾಧ್ಯವೇ!  title=
Virat Kohli

ಇಂದು ಆಸ್ಟ್ರೇಲಿಯಾದ ನಾಡಲ್ಲಿ ಭಾರತ ಪಾಕಿಸ್ತಾನ ತಂಡ ಮುಖಾಮುಖಿಯಾಗಲಿವೆ. ಎರಡು ಬಲಿಷ್ಟ ತಂಡಗಳು ಕಾದಾಡಲು ಸಿದ್ಧವಾಗಿದೆ. ಇನ್ನು 2021ರ ಸೇಡನ್ನು ತೀರಿಸಿಕೊಳ್ಳಲು ಟೀಂ ಇಂಡಿಯಾ ಕಾತುರದಿಂದ ಕಾಯುತ್ತಿದೆ. ಇನ್ನು ಈ ನೆಲದಲ್ಲಿ ವಿರಾಟ್ ಕೊಹ್ಲಿ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಸದ್ಯ ಟಿ 20 ವಿಶ್ವಕಪ್‌ ನಲ್ಲಿ ಬ್ಯಾಟಿಂಗ್ ನಲ್ಲಿ ಅಬ್ಬರಿಸಲು ಕೊಹ್ಲಿ ಸಜ್ಜಾಗಿದ್ದಾರೆ.

ಇದನ್ನೂ ಓದಿ: IND vs PAK T20 World Cup: ಸಾಂಪ್ರದಾಯಿಕ ಬದ್ಧವೈರಿಗಳ ಮುಖಾಮುಖಿ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

ಯುಎಇಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2022 ಏಷ್ಯಾಕಪ್‌ನಲ್ಲಿ ಕೊಹ್ಲಿ 147.59 ಸ್ಟ್ರೈಕ್ ರೇಟ್‌ನಲ್ಲಿ 276 ರನ್ ಗಳಿಸಿದ್ದರು. ಕೊಹ್ಲಿ ಎರಡು ಅರ್ಧ ಶತಕ ಹಾಗೂ ಮೊದಲ ಟಿ20 ಶತಕ ಬಾರಿಸಿದರು. ಈ ಮೂಲಕ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ನಂತರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. 

ಇನ್ನು ಇಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನ ವಿರುದ್ಧ 2022 ರ ಟಿ 20 ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ಕೊಹ್ಲಿ ಭಾರತದ ಪ್ರಮುಖ ಬ್ಯಾಟರ್‌ಗಳಲ್ಲಿ ಒಬ್ಬರಾಗಲಿದ್ದಾರೆ.

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20ಯಲ್ಲಿ ಕೊಹ್ಲಿ ಮಾಡಿರುವ ದಾಖಲೆಯೂ ಅವರಿಗೆ ಹಾಗೂ ತಂಡಕ್ಕೆ ಆತ್ಮವಿಶ್ವಾಸ ತುಂಬಲಿದೆ. 11 T20 ಅಂತರಾಷ್ಟ್ರಿಯಗಳಲ್ಲಿ ಕೊಹ್ಲಿ 144.55 ಸ್ಟ್ರೈಕ್ ರೇಟ್‌ನಲ್ಲಿ 451 ರನ್‌ಗಳನ್ನು ಮತ್ತು 65 ಕ್ಕಿಂತ ಹೆಚ್ಚು ಸರಾಸರಿಯನ್ನು ಹೊಂದಿದ್ದಾರೆ. ಅವರು ಐದು ಅರ್ಧಶತಕಗಳನ್ನು ದಾಖಲಿಸಿದ್ದು, 32 ಬೌಂಡರಿಗಳು ಮತ್ತು 12 ಸಿಕ್ಸರ್ಗಳನ್ನು ಬಾರಿಸಿದ್ದಾರೆ.

ಇದನ್ನೂ ಓದಿ: IND vs PAK: ಇಂಡೋ-ಪಾಕ್ ವಿಶ್ವಕಪ್ ಮುಖಾಮುಖಿಯಲ್ಲಿ ಅತೀ ಹೆಚ್ಚು ಪಂದ್ಯ ಗೆದ್ದಿದ್ದು ಇದೇ ತಂಡ

ಭಾರತ: ರೋಹಿತ್ ಶರ್ಮಾ (ಸಿ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ

ಪಾಕಿಸ್ತಾನ: ಬಾಬರ್ ಆಜಮ್ (c), ಮೊಹಮ್ಮದ್ ರಿಜ್ವಾನ್ (wk), ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಹಾರಿಸ್ ರೌಫ್, ಮೊಹಮ್ಮದ್ ವಾಸಿಮ್ ಜೂನಿಯರ್, ಶಾಹೀನ್ ಅಫ್ರಿದಿ

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News