ಬೆಂಗಳೂರು: ನವೆಂಬರ್ 11 ರಂದು ಪ್ರಧಾನಿ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಲಿದ್ದು,ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಗಾಂಧಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದನ್ನೂ ಓದಿ : PM Kisan ಯೋಜನೆಯಲ್ಲಿ ಪತಿ-ಪತ್ನಿ ಇಬ್ಬರಿಗೂ ಸಿಗುತ್ತಾ 6,000 ರೂ.! ನಿಯಮ ಏನು ಹೇಳುತ್ತೆ?
ಪ್ರಗತಿ ಪ್ರತಿಮೆ ಅನಾವರಣ:
ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನ ಉದ್ಘಾಟನೆಯನ್ನು ಮಾಡಲಿದ್ದಾರೆ.ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು.
ಇದನ್ನೂ ಓದಿ : UK Prime Minister: ಇಂಗ್ಲೆಂಡ್ನ ನೂತನ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯಅತಿಥಿಯಾಗಿ ಬರುವ ಬಗ್ಗೆ 3-4 ಗಣ್ಯರ ಜೊತೆ ಈಗಾಗಲೇ ಚರ್ಚಿಸಲಾಗಿದ್ದು, ಅವರ ಬರುವಿಕೆಯ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರು ಖಾತ್ರಿಗೊಳಿಸಲಿದ್ದಾರೆ ಎಂದರು.ಬಂಡೆಮಠದ ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆಗೆ ಆದೇಶಿದ್ದು, ತನಿಖೆಯ ನಂತರ ಎಲ್ಲ ಸತ್ಯಗಳೂ ಹೊರಬೀಳಲಿದೆ ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.