Rohit Sharma: ಸಿಕ್ಸರ್ ಕಿಂಗ್ ಯುವಿ ದಾಖಲೆ ಮುರಿದ ರೋಹಿತ್ ಶರ್ಮಾ: ಯಾವ ರೆಕಾರ್ಡ್ ಅದು?

ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್ ಬಾರಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಬ್ಯಾಟ್ಸ್ ಮನ್ ಎನಿಸಿಕೊಂಡರು.

Written by - Bhavishya Shetty | Last Updated : Oct 27, 2022, 05:41 PM IST
    • ಟೀಂ ಇಂಡಿಯಾ ನೆದರ್ಲ್ಯಾಂಡ್ಸ್ ಗೆ 180 ರನ್‌ಗಳ ಗುರಿಯನ್ನು ನೀಡಿತ್ತು
    • ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್ ಬಾರಿಸಿದ್ದಾರೆ
    • ಟಿ20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಬ್ಯಾಟ್ಸ್ ಮನ್
Rohit Sharma: ಸಿಕ್ಸರ್ ಕಿಂಗ್ ಯುವಿ ದಾಖಲೆ ಮುರಿದ ರೋಹಿತ್ ಶರ್ಮಾ: ಯಾವ ರೆಕಾರ್ಡ್ ಅದು? title=
Rohit Sharma

2022ರ ಟಿ20 ವಿಶ್ವಕಪ್‌ನ 23ನೇ ಪಂದ್ಯದಲ್ಲಿ ಟೀಂ ಇಂಡಿಯಾ ನೆದರ್ಲ್ಯಾಂಡ್ಸ್ ಗೆ 180 ರನ್‌ಗಳ ಗುರಿಯನ್ನು ನೀಡಿತ್ತು. ಈ ಟಾರ್ಗೆಟ್ ಮುಟ್ಟಲು ಸಾಧ್ಯವಾಗದ ಡಚ್ ಟೀಂ ಸೋಲನ್ನು ಒಪ್ಪಿಕೊಂಡಿತು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ನಂತರ ಸ್ವತಃ ನಾಯಕ ರೋಹಿತ್, ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅರ್ಧಶತಕಗಳೊಂದಿಗೆ ತಂಡವನ್ನು 179 ರನ್‌ಗಳಿಗೆ ಕೊಂಡೊಯ್ದರು.

ಇದನ್ನೂ ಓದಿ: Love Proposal: ಇಂಡೋ-ಡಚ್ಚ್ ಪಂದ್ಯದ ವೇಳೆ ‘ಲವ್ ಪ್ರಪೋಸ್’: ಪ್ರಿಯಕರನ ತಬ್ಬಿಕೊಂಡು ‘ಒಕೆ’ ಅಂದ್ಳು ಚೆಲುವೆ

ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್ ಬಾರಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಬ್ಯಾಟ್ಸ್ ಮನ್ ಎನಿಸಿಕೊಂಡರು.

ಈ ದಾಖಲೆಯಲ್ಲಿ ವಿಶೇಷವೆಂದರೆ ಇದುವರೆಗೆ ಈ ರೆಕಾರ್ಡ್ ಟೀಂ ಇಂಡಿಯಾದ ದಂತಕಥೆಯೊಬ್ಬರ ಹೆಸರಿನಲ್ಲಿತ್ತು ಸದ್ಯ ಅದು ರೋಹಿತ್ ಶರ್ಮಾ ಪಾಲಾಗಿದೆ. ಆ ದಂತಕಥೆಯ ಹೆಸರು ಯುವರಾಜ್ ಸಿಂಗ್. ರೋಹಿತ್‌ಗೂ ಮುನ್ನ ಈ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು. ಅವರು ಟಿ20 ವಿಶ್ವಕಪ್‌ನಲ್ಲಿ ಒಟ್ಟು 33 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಈ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಒಟ್ಟು 26 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಸಿಕ್ಸರ್‌ಗಳಿಗೆ ವಿರಾಟ್ ಮತ್ತು ರೋಹಿತ್ ನಡುವಿನ ವ್ಯತ್ಯಾಸವು ಹೆಚ್ಚಿಲ್ಲ. ಹೀಗಿರುವಾಗ ಈ ಬಾರಿಯ ವಿಶ್ವಕಪ್‌ನಲ್ಲಿ ಇಬ್ಬರು ಬ್ಯಾಟ್ಸ್‌ಮನ್‌ಗಳ ಪೈಕಿ ಒಬ್ಬರನ್ನೊಬ್ಬರು ಹಿಂದಿಕ್ಕುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಬಗ್ಗೆ ಮಾತನಾಡುವುದಾದರೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಟಿ20 ವಿಶ್ವಕಪ್‌ನಲ್ಲಿ ಒಟ್ಟು 63 ಸಿಕ್ಸರ್‌ ಬಾರಿಸಿದ್ದಾರೆ.

 ಇನ್ನು ಪಂದ್ಯದ ಬಗ್ಗೆ ಮಾತನಾಡುವುದಾದರೆ, ಪಂದ್ಯದ ಆರಂಭವು ಭಾರತ ತಂಡಕ್ಕೆ ಉತ್ತಮವಾಗಿಲ್ಲ. ಕೆಎಲ್ ರಾಹುಲ್ ದುರಾದೃಷ್ಟದಿಂದ ಎಲ್ ಬಿಡಬ್ಲ್ಯೂ ಆಗಿ ಮರಳಿದರು. ಅವರ ವಿಕೆಟ್ ನಂತರ ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಜೊತೆಯಾಟ ನಡೆಸಿದರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು 73 ರನ್ ಸೇರಿಸಿದರು. ಇದಾದ ಬಳಿಕ ರೋಹಿತ್ ಶರ್ಮಾ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದರು.

ಇದನ್ನೂ ಓದಿ: Team Indiaದ ‘ತ್ರಿಮೂರ್ತಿ’ಗಳ ಅಬ್ಬರ: ರೋಹಿತ್, ಕೊಹ್ಲಿ, ಯಾದವ್ ಆಟಕ್ಕೆ ನಲುಗಿತು ನೆದರ್ಲ್ಯಾಂಡ್

ರೋಹಿತ್ ವಿಕೆಟ್ ನಂತರ, ವಿರಾಟ್ ಮೂರನೇ ವಿಕೆಟ್‌ಗೆ ಸೂರ್ಯ ಅವರೊಂದಿಗೆ 95 ರನ್‌ಗಳ ಉತ್ತಮ ಜೊತೆಯಾಟವನ್ನು ಮಾಡಿದರು. ಇದರಲ್ಲಿ ಅವರು ಅಜೇಯರಾಗಿ ಉಳಿದರು ಮತ್ತು 44 ಎಸೆತಗಳಲ್ಲಿ 62 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು. ಈ ವೇಳೆ ವಿರಾಟ್ ಮೂರು ಬೌಂಡರಿ ಹಾಗೂ ಎರಡು ಸಿಕ್ಸರ್ ಬಾರಿಸಿದರು. ಇನ್ನೊಂದು ತುದಿಯಲ್ಲಿ ನಿಂತ ಸೂರ್ಯಕುಮಾರ್ ಯಾದವ್ ಕೇವಲ 25 ಎಸೆತಗಳಲ್ಲಿ 51 ರನ್ ಗಳಿಸಿದರು. ಈ ಪಂದ್ಯದಲ್ಲಿ ಸೂರ್ಯ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ಬಾರಿಸಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News