ವೀರಭದ್ರೇಶ್ವರ ರಥೋತ್ಸವದಲ್ಲಿ ಮುರಿದು ಬಿದ್ದ ತೇರು; ಭಕ್ತರು ಪಾರು!

ಎರಡು ವರ್ಷಗಳ ಬಳಿಕ ನಡೆಯುತ್ತಿದ್ದ ಜಾತ್ರೆಯಲ್ಲಿ ದೇವಾಲಯದ ಅರ್ಧ ಸುತ್ತು ಪೂರ್ಣಗೊಳಿಸಿದ ಬಳಿಕ ಏಕಾಏಕಿ ರಥದ ಮೇಲ್ಭಾಗ ಮುರಿದು ಬಿದ್ದು ಚಕ್ರಗಳು ಪಲ್ಟಿಯಾಗಿದೆ. 

Written by - Yashaswini V | Last Updated : Nov 1, 2022, 01:18 PM IST
  • ಎರಡು ವರ್ಷಗಳ ಬಳಿಕ ನಡೆಯುತ್ತಿದ್ದ ಜಾತ್ರೆ
  • ಜಾತ್ರೆಯಲ್ಲಿ ದೇವಾಲಯದ ಅರ್ಧ ಸುತ್ತು ಪೂರ್ಣಗೊಳಿಸಿದ ಬಳಿಕ ಏಕಾಏಕಿ ಮುರಿದು ಬಿದ್ದ ರಥದ ಮೇಲ್ಭಾಗ
  • ಈ ಸಂದರ್ಭದಲ್ಲಿ 800ಕ್ಕೂ ಹೆಚ್ಚು ಭಕ್ತರು ರಥದ ಸುತ್ತ ಇದ್ದರು ಎಂದು ತಿಳಿದುಬಂದಿದೆ
ವೀರಭದ್ರೇಶ್ವರ ರಥೋತ್ಸವದಲ್ಲಿ ಮುರಿದು ಬಿದ್ದ ತೇರು; ಭಕ್ತರು ಪಾರು!  title=
Veerabhadreshwara Swamy Rathotsava

ಚಾಮರಾಜನಗರ: ನೂರಾರು ಭಕ್ತರು ವಿಜೃಂಭಣೆಯಿಂದ ಪಾಲ್ಗೊಂಡಿದ್ದ ಗುಡ್ಡದ ಮಠದ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವದಲ್ಲಿ ಇದ್ದಕ್ಕಿದ್ದಂತೆ ರಥದ ಮೇಲ್ಭಾಗ ಮುರಿದು ಬಿದ್ದ ಆಘಾತಕಾರಿ ಘಟನೆ ನಡೆದಿದೆ.

ಚಾಮರಾಜನಗರ ತಾಲ್ಲೂಕಿನ ಹರನದಹಳ್ಳಿ ಹೋಬಳಿಯ ಚೆನ್ನಪ್ಪನಪುರದ ಅಮಚವಾಡಿ ಗುಡ್ಡದ ಮಠದ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವದಲ್ಲಿ ಸ್ವಾಮಿಯ ತೇರು ಮುರಿದು ಬಿದ್ದ ಪರಿಣಾಮ ಆತಂಕದ ವಾತಾವರಣ ಮನೆ ಮಾಡಿದೆ.

ಇದನ್ನೂ ಓದಿ- ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್ ತೆಂಡೂಲ್ಕರ್‌

ಎರಡು ವರ್ಷಗಳ ಬಳಿಕ ನಡೆಯುತ್ತಿದ್ದ ಜಾತ್ರೆಯಲ್ಲಿ ದೇವಾಲಯದ ಅರ್ಧ ಸುತ್ತು ಪೂರ್ಣಗೊಳಿಸಿದ ಬಳಿಕ ಏಕಾಏಕಿ ರಥದ ಮೇಲ್ಭಾಗ ಮುರಿದು ಬಿದ್ದು ಚಕ್ರಗಳು ಪಲ್ಟಿಯಾಗಿದೆ.  ಈ ಸಂದರ್ಭದಲ್ಲಿ 800ಕ್ಕೂ ಹೆಚ್ಚು ಭಕ್ತರು ರಥದ ಸುತ್ತ ಇದ್ದರು ಎಂದು ತಿಳಿದುಬಂದಿದ್ದು ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ- ಸಕ್ಕರೆನಾಡಿನಲ್ಲಿ ಅಪ್ಪಟ ಕನ್ನಡಾಭಿಮಾನಿ: ಈತನ‌ ಕನ್ನಡಾಭಿಮಾನಕ್ಕೆ ಈತನ‌ ಮನೆಯೇ ಸಾಕ್ಷಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News