ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: 25ಕ್ಕೂ ಹೆಚ್ಚು ಜನರ ಬಂಧನ

ಕಲಬುರಗಿ ನಗರದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ನಡೆಸಲಾಗಿದೆ.

Written by - Zee Kannada News Desk | Last Updated : Nov 1, 2022, 02:11 PM IST
  • ತೆಲಂಗಾಣ ಮಾದರಿಯಲ್ಲಿಯೇ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ
  • ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ
  • ಎಮ್.ಎಸ್.ಪಾಟೀಲ್ ನರಿಬೋಳ ಸೇರಿದಂತೆ 25ಕ್ಕೂ ಅಧಿಕ ಜನರನ್ನು ಬಂಧಿಸಿದ ಪೊಲೀಸರು
ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: 25ಕ್ಕೂ ಹೆಚ್ಚು ಜನರ ಬಂಧನ   title=
ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ!

ಕಲಬುರಗಿ: ತೆಲಂಗಾಣ ಮಾದರಿಯಲ್ಲಿಯೇ ಪ್ರತ್ಯೇಕ ರಾಜ್ಯ ನಿರ್ಮಾಣ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದೆ. ಈ ವೇಳೆ ಪೊಲೀಸರು ಎಮ್.ಎಸ್.ಪಾಟೀಲ್ ನರಿಬೋಳ ಸೇರಿದಂತೆ 25ಕ್ಕೂ ಅಧಿಕ ಜನರನ್ನು ಬಂಧಿಸಿದ್ದಾರೆ.

ನವೆಂಬರ್ 1ರ ಮಂಗಳವಾರ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದರೆ ಶರಣರ ನಾಡು ಕಲಬುರಗಿ ನಗರದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಲಾಗಿದೆ.

ಇದನ್ನೂ ಓದಿ: IPS Officer Transfer: 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರದ ಆದೇಶ

ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ನಡೆಸಲಾಗಿದೆ. ಕೋರ್ಟ್ ಸರ್ಕಲ್‌‌ನಿಂದ ಪಟೇಲ್ ಸರ್ಕಲ್‌ವರೆಗೆ ಸಮೀತಿ ಸದಸ್ಯರು ಹೊರಟಿದ್ದರು. ಈ ವೇಳೆ ಮಾರ್ಗಮಧ್ಯೆಯೇ 25ಕ್ಕೂ ಹೆಚ್ಚು ಜನರನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರದಿಂದ ಆಗಿರುವ ಅನ್ಯಾಯವನ್ನು ಖಂಡಿಸಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಧ್ವಜಾರೋಹಣ ನಡೆಸಲು ಸಮೀತಿ ಸದಸ್ಯರು ಯತ್ನಿಸಿದ್ದರು. ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ನೂರಾರು ಜನರು ಮಾಜಿ ಸಚಿವ ದಿ. ಉಮೇಶ ಕತ್ತಿ ಹಾಗೂ ವೈಜನಾಥ ಪಾಟೀಲ್‌ ಅವರ ಭಾವಚಿತ್ರದ ಜೊತೆಗೆ ಪ್ರತ್ಯೇಕ ರಾಜ್ಯದ ಧ್ವಜ ಹಿಡಿದು ಹೋರಾಟ ನಡೆಸಿದ್ದರು.‌

ಇದನ್ನೂ ಓದಿ: ಸಕ್ಕರೆನಾಡಿನಲ್ಲಿ ಅಪ್ಪಟ ಕನ್ನಡಾಭಿಮಾನಿ: ಈತನ‌ ಕನ್ನಡಾಭಿಮಾನಕ್ಕೆ ಈತನ‌ ಮನೆಯೇ ಸಾಕ್ಷಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News