Global Investors Meet: NRI ಸಮಾವೇಶ ಹಿನ್ನೆಲೆ ಇಂದೋರ್ ಗೆ 6 ವಿಶೇಷ ವಿಮಾನಗಳ ವ್ಯವಸ್ಥೆ

Global Investors Meet: ಇಂದೋರ್ ಮತ್ತು ದಕ್ಷಿಣ ಭಾರತದ ನಡುವೆ ವಾಯು ಸಂಪರ್ಕವನ್ನು ಬಲಪಡಿಸಲು ರಾಜ್ಯ ಸರ್ಕಾರದ ಮನವಿಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಿಂಧಿಯಾ ಇಂದೋರ್‌ನಲ್ಲಿ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎರಡೂ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಸಿದ್ಧತೆಗಳನ್ನು ಪರಿಶೀಲಿಸಿದರು.

Written by - Bhavishya Shetty | Last Updated : Dec 12, 2022, 06:13 PM IST
    • ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಮತ್ತು ಜಾಗತಿಕ ಹೂಡಿಕೆದಾರರ ಶೃಂಗಸಭೆ ಹಿನ್ನೆಲೆ
    • ಇಂದೋರ್‌ಗೆ ಆರು ವಿಶೇಷ ವಿಮಾನಗಳನ್ನು ನಿಯೋಜಿಸಲಾಗುವುದು
    • ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿಕೆ
Global Investors Meet: NRI ಸಮಾವೇಶ ಹಿನ್ನೆಲೆ ಇಂದೋರ್ ಗೆ 6 ವಿಶೇಷ ವಿಮಾನಗಳ ವ್ಯವಸ್ಥೆ title=
NRI

Global Investors Meet: ಮುಂದಿನ ತಿಂಗಳು ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಮತ್ತು ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಸಂದರ್ಭದಲ್ಲಿ ಇಂದೋರ್‌ಗೆ ಆರು ವಿಶೇಷ ವಿಮಾನಗಳನ್ನು ನಿಯೋಜಿಸಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಶನಿವಾರ ಹೇಳಿದ್ದಾರೆ.

ಇಂದೋರ್ ಮತ್ತು ದಕ್ಷಿಣ ಭಾರತದ ನಡುವೆ ವಾಯು ಸಂಪರ್ಕವನ್ನು ಬಲಪಡಿಸಲು ರಾಜ್ಯ ಸರ್ಕಾರದ ಮನವಿಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: Abdul Haq: ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡಿದ ಆರೋಪ: ಪಾಕ್ ಮೌಲಾನಗಳಿಗೆ ಬ್ರಿಟನ್ ನಿರ್ಬಂಧ

ಸಿಂಧಿಯಾ ಇಂದೋರ್‌ನಲ್ಲಿ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎರಡೂ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಸಿದ್ಧತೆಗಳನ್ನು ಪರಿಶೀಲಿಸಿದರು.

“ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಮತ್ತು ಜಾಗತಿಕ ಹೂಡಿಕೆದಾರರ ಶೃಂಗಸಭೆಯ ದೃಷ್ಟಿಯಿಂದ ಇಂದೋರ್‌ಗೆ ಆರು ವಿಶೇಷ ವಿಮಾನಗಳನ್ನು ನಿರ್ವಹಿಸಲಾಗುವುದು. ಈ ಎರಡೂ ಕಾರ್ಯಕ್ರಮಗಳಲ್ಲಿ ಈ ವಿಮಾನಗಳು ಚೆನ್ನೈ, ಬೆಂಗಳೂರು, ಹೈದರಾಬಾದ್, ಕೊಚ್ಚಿ ಮತ್ತು ತಿರುವನಂತಪುರಂನಿಂದ ಇಂದೋರ್‌ಗೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಭಾರತದೊಂದಿಗೆ ಇಂದೋರ್‌ನ ವಾಯು ಸಂಪರ್ಕವನ್ನು ಬಲಪಡಿಸುವ ಅಗತ್ಯವನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ತಮ್ಮ ಗಮನಕ್ಕೆ ತಂದಿದ್ದಾರೆ ಎಂದು ಸಿಂಧಿಯಾ ಹೇಳಿದರು.

ಎರಡೂ ಕಾರ್ಯಕ್ರಮಗಳು ಮಹತ್ವದ್ದಾಗಿರುವುದರಿಂದ ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಲಂಕರಿಸಿ ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಅನಿವಾಸಿ ಕನ್ನಡಿಗರ ರಕ್ಷಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ-ಡಿಕೆಶಿ

ಮುಂದಿನ ವರ್ಷ ಜನವರಿ 8 ರಿಂದ 10 ರವರೆಗೆ ಇಂದೋರ್‌ನಲ್ಲಿ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ನಡೆಯಲಿದೆ. ಮಧ್ಯಪ್ರದೇಶ ಸರ್ಕಾರವು ಸಾಗರೋತ್ತರ ಭಾರತೀಯ ಸಮುದಾಯದ ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಜನವರಿ 10 ಮತ್ತು 11 ರಂದು ಜಾಗತಿಕ ಹೂಡಿಕೆದಾರರ ಶೃಂಗಸಭೆ "ಇನ್ವೆಸ್ಟ್ ಎಂಪಿ" ಅನ್ನು ಆಯೋಜಿಸಲಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News