Good News To Indian Students - ಕೊರೊನಾ ಮಹಾಮಾರಿಯಿಂದ ಜಗತ್ತಿನಾದ್ಯಂತ ವಿದ್ಯಾರ್ಥಿಗಳ ಅಧ್ಯಯನಕ್ಕೆ ಭಾರಿ ಅಡಚಣೆ ಎದುರಾಗಿದೆ. ಅದರಲ್ಲಿಯೂ ವಿಶೇಷವಾಗಿ ವಿದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಇದರಿಂದ ಅಧಿಕ ತೊಂದರೆಗೀಡಾಗಿದ್ದಾರೆ. ಏತನ್ಮಧ್ಯೆ, ಕೋವಿಡ್ ನಿರ್ಬಂಧಗಳಿಂದಾಗಿ ಅಧ್ಯಯನಕ್ಕಾಗಿ ಚೀನಾಕ್ಕೆ ಹಿಂತಿರುಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿದೇಶಾಂಗ ಸಚಿವಾಲಯವು ಭಾರಿ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದೆ.

COMMERCIAL BREAK
SCROLL TO CONTINUE READING

ಜೈಶಂಕರ್ ಹಾಗೂ ಚೀನಾ ವಿದೇಶಾಂಗ ಸಚಿವರು ಮಾತನಾಡಿದರು
ಮಾರ್ಚ್ 25 ರಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರ ನಡುವಿನ ಭೇಟಿಯ ಬಳಿಕ, ಚೀನಾ ಇದೀಗ ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಮಾಹಿತಿಯನ್ನು ನೀಡಿದೆ. ಕೋವಿಡ್‌ನಿಂದ ಚೀನಾದಲ್ಲಿ ವಿಧಿಸಲಾದ ನಿರ್ಬಂಧಗಳಿಂದಾಗಿ ಅಲ್ಲಿಗೆ ಹೋಗಲು ಸಾಧ್ಯವಾಗದ ವಿದ್ಯಾರ್ಥಿಗಳ ಪಟ್ಟಿಯನ್ನು ಭಾರತೀಯ ವಿದೇಶಾಂಗ ಸಚಿವಾಲಯವು ಸಿದ್ಧಪಡಿಸುತ್ತದೆ. ವಿಶೇಷವಾಗಿ ವೈದ್ಯಕೀಯ ವಿದ್ಯಾರ್ಥಿಗಳು, ತಮ್ಮ ಪ್ರಾಯೋಗಿಕ ಪರೀಕ್ಷೆಗಳನ್ನು ನೀಡಲು ಇದರಿಂದ ಸಾಧ್ಯವಾಗಿರಲಿಲ್ಲ.


Food Crisis: ಮುಂದಿನ 27 ವರ್ಷಗಳಲ್ಲಿ ಇಡೀ ವಿಶ್ವದಲ್ಲಿನ ಆಹಾರವೇ ಮುಗಿದು ಹೋಗಲಿದೆಯಂತೆ!

20-22 ಸಾವಿರ ವಿದ್ಯಾರ್ಥಿಗಳು ಚೀನಾಕ್ಕೆ ವಾಪಸ್ಸಾಗಲು ಸಾಧ್ಯವಾಗಿರಲಿಲ್ಲ
ಕೋವಿಡ್ ನಿರ್ಬಂಧಗಳಿಂದ ಸುಮಾರು 20 ರಿಂದ 22 ಸಾವಿರ ವಿದ್ಯಾರ್ಥಿಗಳು ಚೀನಾಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿಯಾಗಿದೆ. ಆದರೆ, ಈ ವೈದ್ಯಕೀಯ ವಿದ್ಯಾರ್ಥಿಗಳು ಆನ್ಲೈನ್ ನಲ್ಲಿ ತಮ್ಮ ತರಗತಿಗಳನ್ನು ಮುಂದುವರೆಸಿದ್ದಾರೆ. ಕಳೆದ ತಿಂಗಳು ಈ ಕುರಿತು ಯುಜಿಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎಚ್ಚರಿಕೆಯನ್ನು ಸಹ ನೀಡಿದೆ ಎಂಬುದು ಇಲ್ಲಿ ಉಲ್ಲೇಖನೀಯ. ಈ ಕುರಿತು ಎಚ್ಚರಿಕೆ ನೀಡಿದ್ದ ಯುಜಿಸಿ, ಒಂದು ವೇಳೆ ವಿದ್ಯಾರ್ಥಿಗಳು ವೈದ್ಯಕೀಯ ಅಧ್ಯಯನವನ್ನು ಆನ್‌ಲೈನ್‌ನಲ್ಲಿ ಮುಂದುವರಿಸಿದರೆ, ಅವರ ಪದವಿಯನ್ನು ಭಾರತದಲ್ಲಿ ಗುರುತಿಸಲಾಗುವುದಿಲ್ಲ ಎಂದು ಹೇಳಿತ್ತು.


ಇದನ್ನೂ ಓದಿ-Shocking Video: ಎರಡು ಅಪಾಯಕಾರಿ ಹೆಬ್ಬಾವುಗಳನ್ನು ಭುಜದ ಮೇಲೆ ಹೊತ್ತು ಡಾನ್ಸ್ ಮಾಡಿದ ವ್ಯಕ್ತಿ, ಮುಂದೇನಾಯ್ತು?

ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು
ಯುಜಿಸಿಯ ಈ ಹೇಳಿಕೆಯನ್ನು ವಿರೋಧಿಸಿ ದೇಶದ ವಿವಿಧ ಭಾಗಗಳಿಂದ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಇಂದು ಶುಕ್ರವಾರವೂ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಇದೀಗ ಚೀನಾ ನೀಡಿರುವ ಈ ಸಡಿಲಿಕೆಯಿಂದಾಗಿ ವಿದ್ಯಾರ್ಥಿಗಳಿಗೆ ಖಂಡಿತ ನೆಮ್ಮದಿ ಸಿಗಲಿದೆ ಎಂಬುದು ಮಾತ್ರ ನಿಜ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.