ಸಾಕು ನಾಯಿ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಹೊರೆಯವರ ಮಧ್ಯೆ ಕಾಳಗ ನಡೆದಿದ್ದು, ಎನ್‌ಆರ್‌ಐ ದಂಪತಿ ವಿರುದ್ಧ ಆಕ್ರೋಶಗೊಂಡಿರುವ ಘಟನೆ ನಡೆದಿದೆ. ಸಾಕು ನಾಯಿಯ ಕಾರಣದಿಂದ ಸ್ಥಳೀಯರು ಈ ದಂಪತಿ ಮೇಲೆ ಕೋಪಗೊಂಡಿದ್ದಾರೆ. ಅಷ್ಟೇ ಅಲ್ಲದೆ, ಮನೆಯ ಮೇಲೆ ಹಾಕಿ ಸ್ಟಿಕ್‌ನಿಂದ ದಾಳಿ ನಡೆಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶ್ರಾವಣ ಮಾಸದಲ್ಲಿ ಮಾಡುವ ಈ ಕೆಲಸಗಳಿಂದ ದೂರವಾಗಲಿದೆ ಎಲ್ಲಾ ಕಷ್ಟ


ಜರ್ಮನಿಯ ಎನ್‌ಆರ್‌ಐ ದಂಪತಿ ಇತ್ತೀಚೆಗೆ ಜೈಪುರಕ್ಕೆ ಆಗಮಿಸಿದ್ದು, ಕೆಲ ದಿನಗಳಿಂದ ಇಲ್ಲಿಯೇ ವಾಸ ಮಾಡುತ್ತಿದ್ದಾರೆ. ಇವರಿಗೆ ನಾಯಿಗಳೆಂದರೆ ತುಂಬಾ ಇಷ್ಟ. ಈ ಹಿನ್ನೆಲೆಯಲ್ಲಿ ಎರಡು ನಾಯಿಗಳನ್ನು ತಂದು ಸಾಕಿದ್ದಾರೆ. ಅವುಗಳನ್ನು ಬೆಳಿಗ್ಗೆ ಮತ್ತು ಸಂಜೆ ವಾಕಿಂಗ್‌ಗೆಂದು ಹೊರಗಡೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆ ಸಂದರ್ಭದಲ್ಲಿ ನಾಯಿಗಳು ರಸ್ತೆಯಲ್ಲೇ ಮಲ ವಿಸರ್ಜನೆ ಮಾಡುತ್ತಿವೆ. ಇದರಿಂದ ಕೋಪಗೊಂಡ ಸ್ಥಳೀಯರು ದಂಪತಿ ಮನೆ ಮೇಲೆ ದಾಳಿ ನಡೆಸಿದ್ದು, ಹಾಕಿ ಸ್ಟಿಕ್‌ನಿಂದ ಹಾನಿ ಮಾಡಿದ್ದಾರೆ. ಇದರಿಂದ ಭಯಗೊಂಡ ದಂಪತಿ ಸದ್ಯ ತಮ್ಮ  ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದಂಪತಿಯ ಮನೆಯ ಮೇಲೆ ಹಾಕಿ ಸ್ಟಿಕ್‌ನಿಂದ ಹಲ್ಲೆ ನಡೆಸಿದ್ದಾರೆ.


ಇನ್ನು ಈ ಅನಿರೀಕ್ಷಿತ ಘಟನೆಯಿಂದ ಗಂಡ-ಹೆಂಡತಿ ಬೆಚ್ಚಿಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಂಪತಿ, "ದಾಳಿಯ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ಜರ್ಮನ್ ರಾಯಭಾರ ಕಚೇರಿ ಮತ್ತು ಪೊಲೀಸರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಮೇಲಾಗಿ ತಮ್ಮ ಸಾಕುನಾಯಿಗಳು ರಸ್ತೆಯಲ್ಲಿ ಮಲವಿಸರ್ಜನೆ ಮಾಡಿದರೆ ಅದನ್ನು ಸ್ವಚ್ಛಗೊಳಿಸುತ್ತೇವೆ. ಆದರೂ ಸಹ ಸ್ಥಳೀಯರು ಹಲ್ಲೆಗೆ ಯತ್ನಿಸಿದ್ದಾರೆ" ಎಂದು ಆರೋಪಿಸಿದ್ದಾರೆ. 


ಇದನ್ನೂ ಓದಿ: Viral Video: ಬೈರ್‌ಸ್ಟೋಗೆ ಬಾಯ್ ಮುಚ್ಕೊಂಡು ಆಡುವಂತೆ ಹೇಳಿದ ಕೊಹ್ಲಿ..!


ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೀಗ ಅದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.