ಕುವೈತ್ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ, 40 ಭಾರತೀಯರು ಸಾವು

ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆಗೆ (ಭಾರತೀಯ ಕಾಲಮಾನ ಸುಮಾರು 9 ಗಂಟೆಗೆ) ಬೆಂಕಿ ಕಾಣಿಸಿಕೊಂಡಿದ್ದು, ಕುವೈತ್‌ನ ಆರೋಗ್ಯ ಸಚಿವಾಲಯದ ಪ್ರಕಾರ, ಬೆಂಕಿಯಿಂದಾಗಿ ಸುಮಾರು 43 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ.

Written by - Manjunath N | Last Updated : Jun 12, 2024, 07:03 PM IST
  • ಈಗ ಘಟನೆಯ ಕುರಿತಾಗಿ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ 'ಕುವೈತ್‌ನಲ್ಲಿ ಸಂಭವಿಸಿದ ಬೆಂಕಿಯ ಘಟನೆ ದುಃಖಕರವಾಗಿದೆ.
  • ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪವಿದೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ
  • ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ
ಕುವೈತ್ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ, 40 ಭಾರತೀಯರು ಸಾವು title=

ಕುವೈತ್‌ನ ದಕ್ಷಿಣ ನಗರವಾದ ಮಂಗಾಫ್‌ನಲ್ಲಿ ಕಟ್ಟಡವೊಂದಕ್ಕೆ ಬೆಂಕಿ ಕಾಣಿಸಿಕೊಂಡಿದೆ, ಈ ಘಟನೆಯಲ್ಲಿ 41 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಮೃತಪಟ್ಟವರಲ್ಲಿ 40 ಭಾರತೀಯರು ಸೇರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?

ಈಗ ಘಟನೆಯ ಕುರಿತಾಗಿ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ 'ಕುವೈತ್‌ನಲ್ಲಿ ಸಂಭವಿಸಿದ ಬೆಂಕಿಯ ಘಟನೆ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪವಿದೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ, ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಂತ್ರಸ್ತ ಜನರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ

ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆಗೆ (ಭಾರತೀಯ ಕಾಲಮಾನ ಸುಮಾರು 9 ಗಂಟೆಗೆ) ಬೆಂಕಿ ಕಾಣಿಸಿಕೊಂಡಿದ್ದು, ಕುವೈತ್‌ನ ಆರೋಗ್ಯ ಸಚಿವಾಲಯದ ಪ್ರಕಾರ, ಬೆಂಕಿಯಿಂದಾಗಿ ಸುಮಾರು 43 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ.

ಕುವೈತ್ ಟೈಮ್ಸ್ ವರದಿ ಪ್ರಕಾರ, ಕುವೈತ್‌ನ ಉಪ ಪ್ರಧಾನಿ ಶೇಖ್ ಫಹಾದ್ ಅಲ್-ಯೂಸುಫ್ ಅಲ್-ಸಬಾಹ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡದ ಮಾಲೀಕರನ್ನು ಬಂಧಿಸುವಂತೆ ಆದೇಶಿಸಿದ್ದಾರೆ. "ದುರದೃಷ್ಟವಶಾತ್, ರಿಯಲ್ ಎಸ್ಟೇಟ್ ಮಾಲೀಕರ ದುರಾಸೆಯೇ ಇಂತಹ ಘಟನೆಗಳಿಗೆ ಕಾರಣವಾಗುತ್ತಿದೆ" ಎಂದು ಆಂತರಿಕ ಮತ್ತು ರಕ್ಷಣಾ ಸಚಿವಾಲಯಗಳನ್ನು ಸಹ ಹೊಂದಿರುವ ಶೇಖ್ ಫಹಾದ್ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News