1915ರ ಜನವರಿ 9 ರಂದು ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಲು ದಕ್ಷಿಣ ಆಫ್ರಿಕಾದಿಂದ ಮಹಾತ್ಮ ಗಾಂಧೀಜಿಯವರು ಭಾರತಕ್ಕೆ ಹಿಂತಿರುಗಿ ಬಂದಿದ್ದರು. ಈ ದಿನದ ನೆನಪಿಗಾಗಿ, ದೇಶದ ಬೆಳವಣಿಗೆಯಲ್ಲಿ ಸಾಗರೋತ್ತರ ಭಾರತೀಯ ಸಮುದಾಯದ ಕೊಡುಗೆಯನ್ನು ಗುರುತಿಸುವ ಸಲುವಾಗಿ ದೇಶದಲ್ಲಿ ಪ್ರತೀ ವರ್ಷ ಜನವರಿ 9ರಂದು ಅನಿವಾಸಿ ಭಾರತೀಯರ ದಿನವನ್ನು ಆಚರಿಸಲಾಗುತ್ತಿದೆ.
ಇದನ್ನು ಓದಿ: Good News: ಭಾರತೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಭಾರತದ ಮುಂದೆ ತನ್ನೀ ಇಚ್ಛೆಯನ್ನು ವ್ಯಕ್ತಪಡಿಸಿದ ಚೀನಾ
ಇನ್ನು ಎನ್‌ಆರ್‌ಐಗಳಿಗಾಗಿಯೇ ಕರ್ನಾಟಕದಲ್ಲಿ ಕೆಲವೊಂದು ನೀತಿಗಳನ್ನು ಜಾರಿಗೊಳಿಸಲಾಗಿತ್ತು. ಈ ನೀತಿಗಳಿಂದ ಅನಿವಾಸಿ ಕನ್ನಡಿಗರು ಮತ್ತು ರಾಜ್ಯದ ನಡುವಿನ ಬಾಂಧವ್ಯ ಗಟ್ಟಿಗೊಳ್ಳುತ್ತದೆ ಎಂದು ನಂಬಲಾಗಿತ್ತು. ಆದರೆ ಕರ್ನಾಟಕದ ಎನ್‌ಆರ್‌ಐ ಕಮಿಟಿಯು ಸದ್ಯ ಕಾರ್ಯ ನಿರ್ವಹಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಮಿಟಿಗೆ ಮರು ಚಾಲನೆ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ.
ಭಾರತದ ಸರ್ಕಾರದ ವಿದೇಶಾಂಗ ವ್ಯವಹಾರಗಳ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅವರು ಕತ್ತಾರ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಭಾರತೀಯ ಸಮುದಾಯ ನಾಯಕರು ಮನವಿ ಸಲ್ಲಿಸಿದ್ದಾರೆ. ಕತ್ತಾರ್ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಜನರ ಕುಂದುಕೊರತೆಗಳನ್ನು ಆಲಿಸಲು ಈ ಕಮಿಟಿಯು ಸಹಕಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಕಮಿಟಿಗೆ ಮರು ಚಾಲನೆ ನೀಡಿ ಎಂದು ಒತ್ತಾಯಿಸಿದ್ದಾರೆ.
ಇದನ್ನು ಓದಿ: NRIಗಳಿಗಾಗಿ ಕರ್ನಾಟಕದಲ್ಲಿ ಜಾರಿಯಾಗಿದೆ ನೀತಿಗಳು: ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
ವಿ ಮುರಳೀಧರನ್ ಅವರು ಕತ್ತಾರ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಶೆರಟನ್ ಹೋಟೆಲ್‌ನಲ್ಲಿ ಭಾರತೀಯ ಸಮುದಾಯ ನಾಯಕರ ಜೊತೆ ಮಾತುಕತೆ ನಡೆಸಿದರು. ಈ ಸಂವಾದ ಕಾರ್ಯಕ್ರಮದಲ್ಲಿ ಕತ್ತಾರ್‌ನ ಉತ್ತರ ಕರ್ನಾಟಕ ಬಳಗದ ಅಧ್ಯಕ್ಷ ಶಶಿಧರ ಹೆಬ್ಬಾಳ ಭಾಗಿಯಾಗಿ, ವಿಷಯಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ.
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.