ಎನ್‌ಆರ್‌ಐ ಸೊಸೈಟಿಯಲ್ಲಿ ಶಾರ್ಟ್ ಸರ್ಕ್ಯೂಟ್: ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತು
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸುಮಾರು 30 ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಸದ್ಯ ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ನೋಯ್ಡಾದ ಕೊಟ್ವಾಲಿ ಪ್ರದೇಶದ ಸೆಕ್ಟರ್ -45 ರಲ್ಲಿರುವ ಎನ್‌ಆರ್‌ಐ ಸೊಸೈಟಿಯ ಫ್ಲ್ಯಾಟ್ ಸಂಖ್ಯೆ 1201 ರಲ್ಲಿ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಸ್ವಲ್ಪ ಹೊತ್ತಿನಲ್ಲೇ ಬೆಂಕಿ ಫ್ಲಾಟ್‌ಗೆ ವ್ಯಾಪಿಸಿದ್ದು, ಜನರು ಭಯಭೀತರಾಗಿದ್ದಾರೆ. ಇನ್ನು ವಿಷಯ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.
ಇದನ್ನೂ ಓದಿ: ಚೆನ್ನೈನಲ್ಲಿ ‘ಡಾ.ಬಿ.ಆರ್.ಅಂಬೇಡ್ಕರ್ ಸುದರ್ ಪ್ರಶಸ್ತಿ’ ಸ್ವೀಕರಿಸಿದ ಸಿದ್ದರಾಮಯ್ಯ
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸುಮಾರು 30 ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಸದ್ಯ ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಅದೃಷ್ಟವಶಾತ್ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಫ್ಲಾಟ್‌ನಲ್ಲಿದ್ದ ಜನರು ಎಚ್ಚರಗೊಂಡಿದ್ದು, ತಕ್ಷಣ ಓಡಿ ಹೊರಬಂದಿದ್ದಾರೆ. ಬೆಂಕಿ ಹೊತ್ತಿಕೊಂಡ ಫ್ಲಾಟ್ 12ನೇ ಮಹಡಿಯಲ್ಲಿದೆ. ಸೊಸೈಟಿಗೆ ಅಗ್ನಿಶಾಮಕ ಎನ್‌ಒಸಿ ಇದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಸಂಬಂಧಿಸಿದ ಇಲಾಖೆ ಮಾಹಿತಿ ಸಂಗ್ರಹಿಸುತ್ತಿದೆ. ಎರಡು ತಿಂಗಳ ಹಿಂದೆ ನಿಥಾರಿ ಮುಖ್ಯರಸ್ತೆಯಲ್ಲಿರುವ ಚೌಧರಿ ಹಂಸರಾಜ್ ಟವರ್ ಕಾಂಪ್ಲೆಕ್ಸ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು.
ಇದನ್ನೂ ಓದಿ: CWG 2022: ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಭಾರತ: ಪದಕದ ನಿರೀಕ್ಷೆ ಜೀವಂತ
10 ಅಂಗಡಿಗಳು ಮತ್ತು 6 ಬೈಕ್‌ಗಳು ಸುಟ್ಟು ಭಸ್ಮ:
ಈ ಅವಘಡದಲ್ಲಿ 10 ಅಂಗಡಿಗಳು ಹಾಗೂ ಆರು ಬೈಕ್‌ಗಳು ಸುಟ್ಟು ಭಸ್ಮವಾಗಿವೆ. ಎಸಿಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಅರುಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಅದೃಷ್ಟವಶಾತ್ ಬೆಂಕಿ ಪಕ್ಕದ ಫ್ಲ್ಯಾಟ್‌ಗೆ ವ್ಯಾಪಿಸಿಲ್ಲ. ಕಡಿಮೆ ಸಮಯದಲ್ಲಿ ನಿಯಂತ್ರಣಕ್ಕೆ ತರಲಾಯಿತು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.