Photo Gallery: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ 11 ನೇ ಘಟಿಕೋತ್ಸವ
ಘಟಿಕೋತ್ಸವದಲ್ಲಿ ಕುಲಸಚಿವರಾದ ಪೆÇ್ರ.ಎಸ್.ಸಿ.ಪಾಟೀಲ್, ಕುಲಸಚಿವ (ಮೌಲ್ಯಮಾಪನ) ಪೆÇ್ರ.ರಮೇಶ್ ಓಲೇಕಾರ ಸೇರಿದಂತೆ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಎಲ್ಲ ನಿಕಾಯದ ಡೀನರು, ಮುಖ್ಯಸ್ಥರುಗಳು, ಸಂಯೋಜಕರುಗಳು, ವಿವಿಧ ಮಹಾವಿದ್ಯಾಲಯಗಳ ಪಾಂಶುಪಾಲರಾಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಕನ್ನಡ ವಿಭಾಗದ ಮೋಹನ್‍ಕುಮಾರ್ ಆರ್.ಜಿ, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸ್ವಾತಿ.ಎ, ಭೌತಶಾಸ್ತ್ರ ವಿಭಾಗದ ಕಾರ್ತಿಕ್ ರೆಡ್ಡಿ ಹೆಚ್.ಕೆ, ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಸಮಾಜಶಾಸ್ತ್ರದ ಸುಮಾ ಕಾಯಣ್ಣನವರ ಹಾಗೂ ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಬಿಎಸ್‍ಸಿ ವಿಭಾಗದ ವಿಶಾಲಾಕ್ಷಿ ಇವರುಗಳಿಗೆ 02 ಚಿನ್ನದ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಸ್ನಾತಕೋತ್ತರ ಕೇಂದ್ರ ನಂದಿಹಳ್ಳಿಯ ಖನಿಜ ಸಂಸ್ಕರಣ ವಿಭಾಗದ ರುಬಾನ್.ಎಲ್, ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಔದ್ಯೋಗಿಕ ರಸಾಯನ ಶಾಸ್ತ್ರ ವಿಭಾಗದ ಹಜಿರಾಜಿ.ಎ ಹಾಗೂ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರದ ರುಷಬ್ ಕುಮಾರ್ ಮೆಹ್ತಾ ಇವರುಗಳಿಗೆ 03 ಚಿನ್ನದ ಪದಕ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ವಿವಿಧ ವಿಭಾಗಗಳ ಒಟ್ಟು 32 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆದುಕೊಂಡರು. ಎಲ್ಲ ವಿಭಾಗಗಳ ಸ್ನಾತಕ ಪದವಿಯ 51 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 72 ಒಟ್ಟು 123 ವಿದ್ಯಾರ್ಥಿಗಳಿಗೆ ರ್ಯಾಂಕ್ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.