ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಒಳಗೆ ಕೆಎಸ್‌ಆರ್‌ಟಿಸಿಗೆ ಸೇರ್ಪಡೆ

Wed, 09 Oct 2024-6:47 pm,

ಬಸ್‌ ಹಿಂಭಾಗದಲ್ಲಿ ಫಾಗ್‌ ಲೈಟ್‌ ಅಳವಡಿಸಿರುವುದರಿಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ.ಚಾಲಕರಿಗೆ ಸುಲಭವಾಗಿ ಕೈಗೆಟಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದೆ. ಬಾಗಿಲಿನ ಮೂಲಕ ಪಾದಚಾರಿಗಳನ್ನು ಸುಲಭವಾಗಿ ಚಾಲಕರು ಗಮನಿಸುವ ವ್ಯವಸ್ಥೆ ಇದೆ.

ಶೇ. 3.5ರಷ್ಟು ಅಧಿಕ ಉದ್ದ ಇರುವ ಬಸ್‌ನಲ್ಲಿ ಪ್ರಯಾಣಿಕರ ಆಸನಗಳ ನಡುವಿನ ಅಂತರ ಹೆಚ್ಚಿಸಲಾಗಿದೆ. ವಿಶಾಲ ಲಗೇಜು ಸ್ಥಳಾವಕಾಶ, ಅತ್ಯಾಧುನಿಕ ಮೊಬೈಲ್‌ ಚಾರ್ಜಿಂಗ್‌ ಪಾಯಿಂಟ್‌, ಉತ್ತಮ ಹವಾನಿಯಂತ್ರಣ ವ್ಯವಸ್ಥೆ ಇದೆ.

ಇಂಧನ ದಕ್ಷತೆ ಹೆಚ್ಚಿರುವ ಏರೋಡೈನಾಮಿಕ್‌ ವಿನ್ಯಾಸ ಅಳವಡಿಸಲಾಗಿದೆ. ಸುಧಾರಿತ ಎಂಜಿನ್‌, ಅಗ್ನಿ ಅವಘಡ ಎಚ್ಚರಿಕೆ ಮತ್ತು ಸುರಕ್ಷತೆ ವ್ಯವಸ್ಥೆ ಅಳವಡಿಸಲಾಗಿದೆ.

ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪ್‌ಗಳಿದ್ದು, 30 ನಾಜಲ್‌ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡ ನಿಯಂತ್ರಿಸುವ ವ್ಯವಸ್ಥೆ ಇದಾಗಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link