ಚಂಡಮಾರುತದ ಸುಳಿಗೆ ಸಿಲುಕಲಿದೆ ಈ ಪ್ರದೇಶ! ಮುಂದಿನ 3 ದಿನ ಜಲಪ್ರವಾಹದ ಭೀತಿ- ಗುಡುಗು, ಬಲವಾದ ಗಾಳಿ ಬೀಸುವ ಸಾಧ್ಯತೆ
ಹವಾಮಾನ ಇಲಾಖೆಯ (IMD) ಇತ್ತೀಚಿನ ಬುಲೆಟಿನ್ ಪ್ರಕಾರ, ಅಕ್ಟೋಬರ್ 23 ಮತ್ತು 24 ರಂದು ಕೇರಳದಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿಯೊಂದಿಗೆ ಚಂಡಮಾರುತದ ಎಚ್ಚರಿಕೆ ಸಹ ನೀಡಲಾಗಿದೆ.
ಈಶಾನ್ಯ ಭಾರತದ ಬಗ್ಗೆ ಮಾತನಾಡುವುದಾದರೆ, ಅಕ್ಟೋಬರ್ 24 ರಂದು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಇದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಚಂಡಮಾರುತ ಸೃಷ್ಟಿಯಾಗಿದೆ. ತೇಜ್ ಎಂಬ ಹೆಸರಿನ ಈ ಚಂಡಮಾರುತ ಯೆಮನ್ ಹಾಗೂ ಒಮನ್ ದೇಶಗಳ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಒಂದು ವೇಳೆ ವಿರುದ್ದ ದಿಕ್ಕಿನಲ್ಲಿ ಸಾಗಿದರೆ ಮುಂಬೈ, ಗುಜರಾತ್ ಸೇರಿದಂತೆ ಪಶ್ಚಿಮ ಕರಾವಳಿ ಭಾಗದಲ್ಲಿ ಅಪಾರ ಹಾನಿಯನ್ನುಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.