Aviva Prasad Bidapa : ಡಿಸೆಂಬರ್ನಲ್ಲಿ ಯಂಗ್ ರೆಬೆಲ್ ಸ್ಟಾರ್ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಎಂಗೇಜ್ಮೆಂಟ್ ಸುದ್ದಿ ಸಖತ್ ವೈರಲ್ ಆಗುತ್ತಿದೆ.
Aviva Prasad Bidapa : ಡಿಸೆಂಬರ್ನಲ್ಲಿ ಯಂಗ್ ರೆಬೆಲ್ ಸ್ಟಾರ್ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಎಂಗೇಜ್ಮೆಂಟ್ ಸುದ್ದಿ ಸಖತ್ ವೈರಲ್ ಆಗುತ್ತಿದೆ. ಆದರೆ ಇತ್ತೀಚೆಗೆ ಈ ವದಂತಿಗಳೆಲ್ಲ ಸುಳ್ಳು ಎಂದು ಸುಮಲತಾ ಅಂಬರೀಷ್ ಹೇಳಿದ್ದರು. ಅಲ್ಲದೇ ಅಭಿಷೇಕ್ ಕೂಡ ಅಲ್ಲಗಳೆದಿದ್ದರು. ಆದರೆ ಇದೀಗ ಅಂಬರೀಶ್ ಕುಟುಂಬದ ಆಪ್ತರ ಪ್ರಕಾರ, ಡಿಸೆಂಬರ್ನಲ್ಲಿ ಅಂಬರೀಷ್ ಎಂಗೇಜ್ ಆಗ್ತಿದ್ದಾರೆ ಎನ್ನಲಾಗಿದೆ.
ಅಂಬರೀಶ್ ಕುಟುಂಬದ ಆಪ್ತರು ಹೇಳುವ ಪ್ರಕಾರ, ಡಿಸೆಂಬರ್ 11 ರಂದು ಅಭಿಷೇಕ್ ಅವರ ನಿಶ್ಚಿತಾರ್ಥ ನಡೆಯಲಿದೆ ಅಂತೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿಯ ಜೊತೆ ಅಭಿಷೇಕ್ ಅವರ ನಿಶ್ಚಿತಾರ್ಥ ನಡೆಯಲಿದೆ ಅಂತೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಹಾಗೂ ಜುಡಿತ್ ಅವರ ಪುತ್ರಿ ಅವಿವ ಜತೆ ಅಭಿಷೇಕ್ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ ಎನ್ನಲಾಗ್ತಿದೆ.
ಅವಿವ ಬಹು ಬೇಡಿಕೆಯ ಫ್ಯಾಷನ್ ಡಿಸೈನರ್ ಆಗಿದ್ದಾರೆ.
ಮಾಡೆಲ್ ಕೂಡ ಆಗಿರುವ ಅವಿವ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 44 ಸಾವಿರಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ.
ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಹುದಿನಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.
ಆದರೆ ಇಬ್ಬರ ನಿಶ್ಚಿತಾರ್ಥದ ಬಗ್ಗೆ ಎರಡೂ ಕುಟುಂಬಗಳು ಯಾವುದೇ ಅಧಿಕೃತ ಮಾಹಿತಿಯನ್ನು ಹೊರಹಾಕಿಲ್ಲ.