ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ರಮೇಶ್ ಪುತ್ರಿ ನಿಹಾರಿಕಾ

Mon, 28 Dec 2020-10:49 pm,

1. ಕನ್ನಡದ ಖ್ಯಾತ ನಟ ರಮೇಶ್ ಅರವಿಂದ್ ಮಗಳ ಪುತ್ರಿ ನಿಹಾರಿಕಾ ಅಕ್ಷಯ್ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ಖಾಸಗಿ ರೆಸಾರ್ಟ್‌ನಲ್ಲಿ ಬೆಳಿಗ್ಗೆ 11ರಿಂದ 11.30ರ ಶುಭ ಲಗ್ನದಲ್ಲಿ ವಿವಾಹ ಕಾರ್ಯಕ್ರಮ ನೆರವೇರಿದೆ.  

2. ನಿಹಾರಿಕಾ ಮತ್ತು ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡೂ ಕುಟುಂಬದವರ ಸಮ್ಮತಿ ಮೇರೆಗೆ ಈ ವಿವಾಹ ಸಮಾರಂಭ ನೆರವೇರಿದೆ.  ನಿಹಾರಿಕಾ ಗುಲಾಬಿ ಬಣ್ಣದ ಸೀರೆಯಲ್ಲಿ ಮಿರ ಮಿರ ಮಿಂಚುತ್ತಿದ್ದರು.

3. ಕರೋನಾ ಆತಂಕದ ಹಿನ್ನೆಲೆಯಲ್ಲಿ ಆಪ್ತರು ಮತ್ತು ಕುಟುಂಬ ಸದಸ್ಯರಿಗಷ್ಟೇ ಆಹ್ವಾನವಿತ್ತು. ಹಾಗಾಗಿ ಕುಟುಂಬ ಸದಸ್ಯರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು. 

4. ಜನವರಿ 16ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅಂದು ಚಿತ್ರರಂಗ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link