ವಿಶ್ವದ ಶ್ರೇಷ್ಠ ನಿರ್ದೇಶಕರ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದ ನಟ ಉಪೇಂದ್ರ...!
1992ರಲ್ಲಿ ತೆರೆಗೆ ಬಂದ 'ತರ್ಲೆನನ್ಮಗ' ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಉಪೇಂದ್ರ ಮುಂದೆ 1993ರಲ್ಲಿ 'ಶ್' ಎಂಬ ಹಾರರ್ ಚಿತ್ರ ನಿರ್ದೇಶಿಸಿದರು. 1995ರಲ್ಲಿ ಬಿಡುಗಡೆಯಾದ ಶಿವರಾಜಕುಮಾರ್ ಅಭಿನಯದ 'ಓಂ' ಚಿತ್ರ ಇಡೀ ಭಾರತ ಚಿತ್ರರಂಗದಲ್ಲಿಯೇ ಹೊಸ ಸಂಚಲನ ಸೃಷ್ಟಿಸಿತು.
ವಿಭಿನ್ನ ಮಾದರಿಯ ಸಿನಿಮಾಗಳಿಗೆ ಹೆಸರುವಾಸಿಯಾಗಿರುವ ಉಪೇಂದ್ರ ಸುಮಾರು 10 ಸಿನಿಮಾಗಳನ್ನು ನಿರ್ದೇಶಿಸಿರುವುದಲ್ಲದೆ 60 ಚಿತ್ರಗಳಲ್ಲಿ ನಟಿಸಿದ್ದಾರೆ.
ಈ ಪಟ್ಟಿಯಲ್ಲಿ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಮೊದಲ ಸ್ಥಾನದಲ್ಲಿದ್ದರೆ, ಬಾಲಿವುಡ್ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಎರಡನೇ ಸ್ಥಾನ ಪಡೆದಿದ್ದಾರೆ.
ಇದೆ ವೇಳೆ ಈಗ ವಿಶ್ವದ ಟಾಪ್ ನಿರ್ದೇಶಕರ ಪಟ್ಟಿಯನ್ನು ಬಿಡುಗಡೆ ಮಾಡಿರುವ IMDb, ಪಟ್ಟಿಯಲ್ಲಿ ನಿರ್ದೇಶಕ ಮತ್ತು ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಸ್ಥಾನ ಪಡೆದಿದ್ದಾರೆ.
COVID-19, AI, ಜಾಗತಿಕ ತಾಪಮಾನ ಏರಿಕೆ, ಸಾಮಾಜಿಕ ಮಾಧ್ಯಮ ಮತ್ತು ಯುದ್ಧಗಳಿಂದ ಧ್ವಂಸಗೊಂಡ 2040 ರಲ್ಲಿ ನಡೆಯುವ ವಿದ್ಯಮಾನಗಳ ಜೊತೆ ಜೋಡಿಸಲಾಗಿದೆ.