Aditi Prabhudeva : ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ಅದಿತಿ ಪ್ರಭುದೇವ ವಯಸ್ಸೆಷ್ಟು ಗೊತ್ತಾ?

Fri, 13 Jan 2023-3:23 pm,

ಸ್ಯಾಂಡಲ್‍ವುಡ್ ನಟಿ ಅದಿತಿ ಪ್ರಭುದೇವ ಅವರಿಗೆ ಇಂದು ಜನ್ಮದಿನದ ಸಂಭ್ರಮ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ಸ್‌ ಮಾಡಿದ್ದಾರೆ.   

ಅದಿತಿ ಪ್ರಭುದೇವ ಅಪ್ಪಟ ಕನ್ನಡತಿ. ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿರುವ ಈ ಸ್ಯಾಂಡಲ್‌ವುಡ್‌ ಬ್ಯೂಟಿಗೆ ಇಂದು ಬರ್ತ್‌ ಡೇ ಸಂಭ್ರಮ.   

ಅದಿತಿ ಪ್ರಭುದೇವ ಮೊದಲು ಆಂಕರ್ ಆಗಿ ವೃತ್ತಿಜೀವನ ಪ್ರಾರಂಭಿಸಿದ್ದರು. ‘ಗುಂಡ್ಯಾನ್ ಹೆಂಡ್ತಿ’ ಧಾರವಾಹಿಯ ಮೂಲಕ ಕಿರುತೆರೆಗೆ ಪ್ರವೇಶಿಸಿದರು.   

1994, ಜನವರಿ 13 ರಂದು ಜನಿಸಿದ್ದು, ಅವರ ವಯಸ್ಸು 29 ವರ್ಷ.    

2017 ರಲ್ಲಿ ನಟ ಅಜಯ್ ರಾವ್ ಜೊತೆ ‘ಧೈರ್ಯಂ’ ಚಿತ್ರದಲ್ಲಿ ನಟಿಸುವ ಮೂಲಕ ಬಿಗ್‌ ಸ್ಕ್ರೀನ್‌ಗೆ ಪದಾರ್ಪಣೆ ಮಾಡಿದರು.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link