`ಈ ವ್ಯಕ್ತಿಯನ್ನು ಮದುವೆ ಆಗುತ್ತೇನೆ`- ಕೊನೆಗೂ ಮದುವೆಗೆ ಗ್ರೀನ್ ಸಿಗ್ನಲ್ ಕೊಟ್ರಾ ನಟಿ ಅನುಷ್ಕಾ ಶೆಟ್ಟಿ! ಹುಡುಗ ಯಾರು?
ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸದ್ಯ ತೆಲುಗು, ತಮಿಳು ಮತ್ತು ಮಲಯಾಳಂ ಸಿನಿರಂಗದಲ್ಲಿ ನಟಿಸಿ ಭೇಷ್ ಎನಿಸಿಕೊಂಡಿರುವ ಬಹುಬೇಡಿಕೆಯ ನಟಿ.
ಇವರ ಮದುವೆ ವಿಚಾರ ಆಗಾಗ್ಗೆ ಮುನ್ನೆಲೆಗೆ ಬರುತ್ತಿರುತ್ತದೆ. ಇತ್ತೀಚೆಗೆ 42 ವರ್ಷದ ಕನ್ನಡದ ನಿರ್ಮಾಪಕನ ಜೊತೆ ಅನುಷ್ಕಾ ಮದುವೆಯಾಗಲಿದ್ದಾರೆ ಎಂಬ ವದಂತಿಯೂ ಹಬ್ಬಿತ್ತು.
ಈ ಎಲ್ಲದರ ಮಧ್ಯೆ ಇದೀಗ ಮತ್ತೊಂದು ವದಂತಿ ಮುನ್ನೆಲೆಗೆ ಬಂದಿದೆ. ಅದೇನೆಂದರೆ ನಟಿ ಅನುಷ್ಕಾ ಶೆಟ್ಟಿ ಮತ್ತು ನಟ ರಕ್ಷಿತ್ ಶೆಟ್ಟಿ ಮದುವೆಯಾಗುತ್ತಿದ್ದಾರೆ.
ಬಾಹುಬಲಿ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ನಟಿ ಅನುಷ್ಕಾ ಶೆಟ್ಟಿ. ಇವರ ಮದುವೆ ಬಗ್ಗೆ ಅಭಿಮಾನಿಗಳಿಗೆ ಭಾರೀ ಕುತೂಹಲ ಇದೆ.
ಕನ್ನಡದ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಗುಸು ಗುಸು ಹರಿದಾಡಿತ್ತು. ಅದೇ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಮತ್ತು ಅನುಷ್ಕಾ ಶೆಟ್ಟಿ ಒಂದೇ ಭಾಗದವರು. ಮೇಲಾಗಿ ಒಂದೇ ಸಮುದಾಯದವರು. ಇದೇ ಕಾರಣದಿಂದ ಇವರಿಬ್ಬರು ಮದುವೆಯಾಗಲಿ ಎಂದು ಅನೇಕ ನೆಟ್ಟಿಗರು ಹೇಳಿದ್ದುಂಟು
ಮತ್ತೊಂದೆಡೆ ಎರಡು ವರ್ಷಗಳ ಹಿಂದೆ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಅನುಷ್ಕಾ ಮದುವೆ ಬಗ್ಗೆ ಭವಿಷ್ಯ ನುಡಿದಿದ್ದರು. 'ಆದಷ್ಟು ಬೇಗ ಅನುಷ್ಕಾ ಮದುವೆಯಾಗಲಿದ್ದಾರೆ' ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನಟಿ ಅನುಷ್ಕಾ, "ನನಗೆ ಇನ್ನೂ ಕೆಲವು ವರ್ಷಗಳು ಮದುವೆಯಾಗುವ ಯೋಚನೆ ಇಲ್ಲ, ಸದ್ಯ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದೇನೆ. ಚಿತ್ರರಂಗಕ್ಕೆ ಸಂಬಂಧಪಡದ ವ್ಯಕ್ತಿಯನ್ನು ಮದುವೆ ಆಗುತ್ತೇನೆ" ಎಂದು ಹೇಳಿಕೆ ನೀಡಿದ್ದರು.