ಅರಶಿನದ ನೀರಿಗೆ ಈ ಕಪ್ಪು ಬೀಜ ಸೇರಿಸಿ ಕುಡಿಯಿರಿ: ಸೊಂಟದ ಸುತ್ತ ಜೋತು ಬಿದ್ದ ಕಠಿಣ ಬೊಜ್ಜು ಸರಾಗವಾಗಿ ಕರಗುತ್ತೆ

Wed, 13 Mar 2024-7:49 pm,

ಅರಿಶಿನವು ಕರ್ಕ್ಯುಮಿನ್ ಎಂಬ ಉತ್ಕರ್ಷಣ ನಿರೋಧಕವನ್ನು ಹೊಂದಿದೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದಲ್ಲದೆ, ಜೀವಕೋಶಗಳನ್ನು ರಕ್ಷಿಸುತ್ತದೆ. ಅಂದಹಾಗೆ ಅರಿಶಿನವನ್ನು ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ.

ಅರಿಶಿನ ಬೆರೆಸಿದ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಪಿತ್ತರಸವು ಸರಿಯಾಗಿ ಉತ್ಪತ್ತಿಯಾಗುತ್ತದೆ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ ಎಂದು ಅನೇಕ ಸಂಶೋಧನೆಗಳು ಬಹಿರಂಗಪಡಿಸಿವೆ.

ಅರಿಶಿನದಲ್ಲಿರುವ ಲಿಪೊಪೊಲಿಸ್ಯಾಕರೈಡ್ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಲ್ ಗುಣಲಕ್ಷಣಗಳನ್ನು ಹೊಂದಿದೆ.

ಇದರಲ್ಲಿ ಕಂಡುಬರುವ ಕರ್ಕ್ಯುಮಿನ್ ಇನ್ಸುಲಿನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅನೇಕ ಸಂಶೋಧನೆಗಳು ಬಹಿರಂಗಪಡಿಸಿವೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ವೇಗವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ, ಅರಿಶಿನದ ನೀರಿಗೆ ಜೀರಿಗೆ ಅಥವಾ ಸಬ್ಜಾ ಬೀಜ ಸೇರಿಸಿ ಕುಡಿಯಬಹುದು. ಇದು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್’ಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಮಲಗುವ ಮುನ್ನ ಕುಡಿದರೆ ಉತ್ತಮ.

ಅರಿಶಿನ ಬೆರೆಸಿದ ಪಾನೀಯವು ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ರಕ್ತವನ್ನು ನೈಸರ್ಗಿಕವಾಗಿ ಶುದ್ಧೀಕರಿಸುತ್ತದೆ. ಚರ್ಮವನ್ನು ಸಹ ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

ಅರಿಶಿನ ಮಿಶ್ರಿತ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತದೆ. ಅರಿಶಿನದಲ್ಲಿ ಕ್ಯಾನ್ಸರ್ ವಿರೋಧಿ ಗುಣಗಳಿವೆ. ಇದರೊಂದಿಗೆ ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಕೋಶಗಳ ರಚನೆಯನ್ನು ತಡೆಯುತ್ತದೆ.

ಒಂದು ಲೋಟ ಬಿಸಿ ನೀರಿನಲ್ಲಿ ಕಾಲು ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮಿಶ್ರಣ ಮಾಡಿ. ಇದಕ್ಕೆ ಸ್ವಲ್ಪ ಜೀರಿಗೆ ಅಥವಾ ಚಿಯಾ ಬೀಜಗಳನ್ನು ಸೇರಿಸಬಹುದು. ವಾರಕ್ಕೆ ಒಂದೆರಡು ಬಾರಿ ಕುಡಿದರೆ ಬೆಸ್ಟ್ ರಿಸಲ್ಟ್ ಸಿಗುತ್ತದೆ.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link