ಈ ಪುಡಿ ಬೆರೆಸಿ ಚಪಾತಿ ಹಿಟ್ಟು ಕಲಸಿದರೆ ಮಧುಮೇಹಿಗಳಿಗೆ ಅದೇ ದಿವ್ಯೌಷಧ !ಬ್ಲಡ್ ಶುಗರ್ ಕಂಟ್ರೋಲ್ ಆಗುವುದು ಖಂಡಿತಾ
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು, ಚಪಾತಿ ಹಿಟ್ಟು ಕಲಸುವಾಗ ದಾಲ್ಚಿನ್ನಿ ಪುಡಿಯನ್ನು ಸೇರಿಸಬೇಕು.ದಾಲ್ಚಿನ್ನಿ ಉತ್ಕರ್ಷಣ ನಿರೋಧಕಗಳು, ಉರಿಯೂತ ನಿವಾರಕಗಳಂತಹ ಅನೇಕ ಗುಣಗಳನ್ನು ಹೊಂದಿದೆ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಣಾಮಕಾರಿಯಾಗಿದೆ.
ಒಮಕಾಳಿನಲ್ಲಿರುವ ಥೈಮೋಲ್ ಮತ್ತು ಕಾರ್ವಾಕ್ರೋಲ್ ಉತ್ತಮ ಇನ್ಸುಲಿನ್ ಸೂಕ್ಷ್ಮತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.ಇದು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸುತ್ತದೆ.ಚಪಾತಿ ಹಿಟ್ಟು ಕಲಸುವಾಗ ಅರ್ಧ ಚಮಚ ಒಮಕಾಳು ಬೆರೆಸಿದರೆ ಸಾಕು.
ಅರಿಶಿನವು ಕರ್ಕ್ಯುಮಿನ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.ಹಾಗಾಗಿ ಚಪಾತಿ ಹಿಟ್ಟಿನಲ್ಲಿ ಒಂದು ಚಿಟಿಕೆ ಅರಿಶಿನವನ್ನು ಬೆರೆಸಬೇಕು.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬೇಕಾದರೆ ಚಪಾತಿ ಹಿಟ್ಟು ಕಲಸುವಾಗ ಅದಕ್ಕೆ ಶುಂಠಿ ರಸವನ್ನು ಮಿಶ್ರಣ ಮಾಡಬೇಕು.ಇದು ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಗುಣವನ್ನು ಹೊಂದಿದೆ.
ಚಪಾತಿ ಹಿಟ್ಟಿಗೆ ಜೀರಿಗೆ ಬೆರೆಸುವ ಮೂಲಕ ಕೂಡಾ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಬೇಕಾದರೆ ಚಪಾತಿ ಹಿತ್ತಾನ್ನು ಹೀಗೆಯೇ ಕಲಸಿ.
ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿದೆ.ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.