Tender Coconut Water for Weight Loss: ಎಳನೀರನ್ನು ಅದ್ಭುತ ಪಾನೀಯ ಎಂದು ಕರೆಯಲಾಗುತ್ತದೆ. ಈ ರಿಫ್ರೆಶ್ ಪಾನೀಯವು ರುಚಿಯಷ್ಟೇ ಅಲ್ಲದೆ, ತೂಕ ನಷ್ಟಕ್ಕೆ ಕೂಡ ಸಹಾಯಕವೆಂದು ಪರಿಗಣಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಎಳನೀರು ಕಡಿಮೆ ಕ್ಯಾಲೊರಿಗಳನ್ನು ಹೊಂದಿದೆ. ಜೊತೆಗೆ ಪೊಟ್ಯಾಸಿಯಮ್’ನಂತಹ ನೈಸರ್ಗಿಕ ಕಿಣ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ವಿಶೇಷವಾಗಿ ತೂಕ ನಷ್ಟಕ್ಕೆ ತೆಂಗಿನ ನೀರು ಕುಡಿಯಲು ಸರಿಯಾದ ಮಾರ್ಗ ಯಾವುದು ಎಂದು ತಿಳಿಯೋಣ.
ಎಳನೀರು ಆರೋಗ್ಯಕ್ಕೆ ಒಳ್ಳೆಯದು. ಇದನ್ನು ದಿನದ ಯಾವುದೇ ಸಮಯದಲ್ಲಿ ಬೇಕಾದರೂ ಕುಡಿಯಬಹುದು. ಆದರೆ, ತೂಕ ಇಳಿಸುವ ವಿಷಯಕ್ಕೆ ಬಂದರೆ, ಸರಿಯಾದ ಸಮಯಕ್ಕೆ ಸೇವಿಸುವುದು ಉತ್ತಮ.
ಡಾ.ಅಂಜು ಸೂದ್ ಅವರ ಪ್ರಕಾರ, ಎಳನೀರು ಅನೇಕ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿದ್ದು, ದೇಹವನ್ನು ಹೈಡ್ರೇಟ್ ಮಾಡುವುದರ ಜೊತೆಗೆ ತಾಜಾತನವನ್ನು ನೀಡುತ್ತದೆ.
ತೂಕ ಇಳಿಸಿಕೊಳ್ಳಲು ಬಯಸುವವರು ಎಳನೀರನ್ನು ತಮ್ಮ ಜೀವನಶೈಲಿ ಮತ್ತು ಆಹಾರದ ಭಾಗವಾಗಿ ಮಾಡಿಕೊಳ್ಳಲು ಹಿಂಜರಿಯಬೇಡಿ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಹೊಟ್ಟೆಗೆ ತುಂಬಾ ಒಳ್ಳೆಯದು. ಜೈವಿಕ-ಸಕ್ರಿಯ ಕಿಣ್ವಗಳಲ್ಲಿ ಸಮೃದ್ಧವಾಗಿರುವ ಇದು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಚಯಾಪಚಯವನ್ನು ಹೆಚ್ಚಿಸುತ್ತದೆ.
ಚಯಾಪಚಯ ದರ ಹೆಚ್ಚಾದಷ್ಟೂ ದೇಹವು ಕೊಬ್ಬನ್ನು ಸುಡುತ್ತದೆ. ಉತ್ತಮವಾದ ಅಂಶವೆಂದರೆ ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್‌ಗಳಿದ್ದರೂ, ಎಳನೀರನ್ನು ಕುಡಿಯುವುದರಿಂದ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿರುತ್ತದೆ. ದಿನಕ್ಕೆ 3 ರಿಂದ 4 ಬಾರಿ ಎಳನೀರು ಸೇವಿಸುವುದರಿಂದ ತೂಕ ಶೀಘ್ರವಾಗಿ ಕಡಿಮೆಯಾಗುತ್ತದೆ.
ತೆಂಗಿನ ನೀರನ್ನು ಕುಡಿಯಲು ಸರಿಯಾದ ಸಮಯದ ಕುರಿತು ಮಾತನಾಡಿದರೆ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದಕ್ಕೆ ಅರ್ಧ ಚಮಚ ನಿಂಬೆ ರಸ ಸೇರಿಸಿ ಸತತ 7 ದಿನಗಳವರೆಗೆ ಸೇವಿಸಿದರೆ ಕೇವಲ 5 ದಿನದಲ್ಲಿ ನಿಮಗೆ ಫಲಿತಾಂಶ ಗೋಚರವಾಗುತ್ತದೆ.
ಲಾರಿಕ್ ಆಮ್ಲವು ಎಳನೀರಿನಲ್ಲಿ ಕಂಡುಬರುತ್ತದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಮೊದಲೇ ಹೇಳಿದಂತೆ, ಇದು ಚಯಾಪಚಯವನ್ನು ವೇಗಗೊಳಿಸುತ್ತದೆ. ಹೀಗಾಗಿ ಇದು ತೂಕ ನಷ್ಟಕ್ಕೆ ಸಹಕಾರಿ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಹೊರುವುದಿಲ್ಲ.