ಕ್ರಿಕೆಟ್ ಅಭಿಮಾನಿಗಳಿಗೆ ಬಿಗ್ ಶಾಕ್ ! ಒನ್ ಡೇ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಟಗಾರ
ಕ್ರಿಕೆಟ್ ಅಭಿಮಾನಿಗಳಿಗೊಂದು ಶಾಕಿಂಗ್ ಸುದ್ದಿ ಇದು. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಬಳಿಕ ಈ ದಿಗ್ಗಜ್ಜ ಆಟಗಾರ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ.
ಈ ಆಟಗಾರ ಏಕದಿನ ಪಂದ್ಯದಿಂದ ನಿವೃತ್ತಿಯಾಗುವುದಾಗಿ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ. ಈ ಮೂಲಕ ಈ ದಿಗ್ಗಜ್ಜ ಆಟಗಾರ ಅಭಿಮಾನಿಗಳಿಗೆ ದಿಢೀರ್ ಶಾಕ್ ಕೊಟ್ಟಿದ್ದಾರೆ.
ಅಫಾಘಾನಿಸ್ತಾನದ ಮೊಹಮ್ಮದ್ ನಬಿ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ನಸೀಬ್ ಖಾನ್ ಶುಕ್ರವಾರ ಈ ಮಾಹಿತಿ ನೀಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ನಂತರ ತಮ್ಮ ಏಕದಿನ ವೃತ್ತಿಜೀವನವನ್ನು ಕೊನೆಗೊಳಿಸಲು ಬಯಸುವುದಾಗಿ ಮೊಹಮ್ಮದ್ ನಬಿ ಕೆಲವು ತಿಂಗಳ ಹಿಂದೆ ನನಗೆ ಹೇಳಿದ್ದರು. ಅವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ನಸೀಬ್ ಖಾನ್ ಹೇಳಿದ್ದಾರೆ.
39 ವರ್ಷದ ಮೊಹಮ್ಮದ್ ನಬಿ ಅಫ್ಘಾನಿಸ್ತಾನದ ODI ತಂಡದ ಅತ್ಯಂತ ಅನುಭವಿ ಆಟಗಾರರಲ್ಲಿ ಒಬ್ಬರು. ಮೊಹಮ್ಮದ್ ನಬಿ ಇದುವರೆಗೆ 165 ಏಕದಿನ ಪಂದ್ಯಗಳಲ್ಲಿ 3,549 ರನ್ ಗಳಿಸಿದ್ದು, 171 ವಿಕೆಟ್ ಕೂಡ ಪಡೆದಿದ್ದಾರೆ.
ಹಿರಿಯ ಆಲ್‌ರೌಂಡರ್ ಮೊಹಮ್ಮದ್ ನಬಿ 2019ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಮೊಹಮ್ಮದ್ ನಬಿ ಅಫ್ಘಾನಿಸ್ತಾನ ಪರ 3 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದಲ್ಲದೇ ಐಪಿಎಲ್ ನ 24 ಪಂದ್ಯಗಳಲ್ಲೂ ತಮ್ಮ ಪ್ರತಿಭೆ ತೋರಿದ್ದಾರೆ. ಮೊಹಮ್ಮದ್ ನಬಿ ಈ ಲೀಗ್‌ನಲ್ಲಿ 143.33 ವೇಗದ ಸ್ಟ್ರೈಕ್ ರೇಟ್‌ನಲ್ಲಿ 215 ರನ್ ಗಳಿಸಿದ್ದಾರೆ ಮತ್ತು ಬೌಲಿಂಗ್‌ನಲ್ಲಿ 15 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.
ಮೊಹಮ್ಮದ್ ನಬಿ ತಮ್ಮ ಅನುಭವ ಮತ್ತು ಆಲ್ ರೌಂಡ್ ಆಟದಿಂದ ಅಫ್ಘಾನಿಸ್ತಾನ ಕ್ರಿಕೆಟ್ ತಂಡವನ್ನು ಹಲವು ಸಂದರ್ಭಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದಾರೆ.