Chaturgrahi Yog: 12 ವರ್ಷಗಳ ಬಳಿಕ ಮೇಷ ರಾಶಿಯಲ್ಲಿ ಚತುರ್ಗ್ರಹಿ ಯೋಗ, ಈ ಜನರ ಮೇಲೆ ಭಾರಿ ಧನವೃಷ್ಟಿ!

Sat, 01 Apr 2023-1:37 pm,

ಮಿಥುನ ರಾಶಿ: ಮೇಷ ರಾಶಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಚತುರ್ಗ್ರಹಿ ಯೋಗ ನಿಮ್ಮ ಪಾಲಿಗೆ ಸಾಕಷ್ಟು ಕಾನುಕೂಲಕರ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಜಾತಕದ ಆದಾಯ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಸಾಕಷ್ಟು ಹೆಚ್ಚಳವಾಗಲಿದೆ. ಇದಲ್ಲದೆ ಹಲವು ಮೂಲಗಳಿಂದ ನಿಮಗೆ ಆದಾಯ ಹರಿದು ಬರಲಿದೆ. ಕಾರ್ಯಕ್ಷೇತ್ರದಲ್ಲಿ ಸಾಕಷ್ಟು ಯೋಚಿಸಿ ಕೈಗೊಂಡ ನಿರ್ಧಾರಗಳು ನಿಮ್ಮ ಪರವಾಗಿರಲಿವೆ. ನಿಮಗೆ ಹೆಚ್ಚಿನ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ಷೇರು ಮಾರುಕಟ್ಟೆ, ಲಾಟರಿಗಳಿಂದ ಧನಲಾಭವಾಗುವ ಸಾಧ್ಯತೆ ಇದೆ.   

ಸಿಂಹ ರಾಶಿ: ಚತುರ್ಗ್ರಹಿ ಯೋಗ ನಿರ್ಮಾಣ ನಿಮ್ಮ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಜಾತಕದ ನವಮ ಭಾವದಲಿ ನಿರ್ಮಾಣಗೊಳ್ಳುತ್ತಿದೆ. ಇದನ್ನು ಅದೃಷ್ಟ ಹಾಗೂ ವಿದೇಶಿ ಸ್ಥಾನ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಇದಲ್ಲದೆ ಈ ಅವಧಿಯಲ್ಲಿ ನೀವು ಮಾಡುವ ಯಾತ್ರೆಗಳು ಕೂಡ ನಿಮಗೆ ಶುಭ ಫಲಿತಾಂಶಗಳನ್ನು ನೀಡಲಿವೆ. ನೌಕರಿ ಹಾಗೂ ವಿದ್ಯಾಭ್ಯಾಸದ ದೃಷ್ಟಿಯಿಂದ ವಿದ್ಯಾರ್ಥಿಗಳು ಯಾತ್ರೆ ಕೈಗೊಳ್ಳಬಹುದು. ಈ ಅವಧಿಯಲ್ಲಿ ನಿಮ್ಮ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ. ಈ ಸಮಯದಲ್ಲಿ ನೀವು ಯಾವುದಾದರೊಂದು ಧಾರ್ಮಿಕ ಹಾಗೂ ಮಂಗಳ ಕಾರ್ಯದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.   

ಕರ್ಕ ರಾಶಿ: ಚತುರ್ಗ್ರಹಿ ಯೋಗ ನಿರ್ಮಾಣ ಕರ್ಕ ರಾಶಿಯ ಜಾತಕದವರ ಪಾಲಿಗೆ ಲಾಭಪ್ರದ ಸಾಬೀಟಾಗುವ ಸಾಧ್ಯತೆ ಇದೆ. ಏಕೆಂದರೆ ಈ ಯೋಗ ನಿಮ್ಮ ಗೋಚರ ಜಾತಕದ ಕರ್ಮ ಭಾವದ ಮೇಲೆ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅಪಾರ ಕಾರ್ಯ ಸಿದ್ದಿ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಆರ್ಡರ್ ಗಳು ಬರಲಿವೆ. ಹೀಗಾಗಿ ಅವರಿಗೆ ಉತ್ತಮ ಧನಲಾಭ ಕೂಡ ಆಗಲಿದೆ. ಇದರಿಂದ ಆದಾಯದಲ್ಲಿ ನೀವು ವೃದ್ಧಿಯನ್ನು ಗಮನಿಸಬಹುದು. ಹೊಟೇಲ್, ರೆಸ್ಟೋರೆಂಟ್, ಧಾನ್ಯಗಳಿಗೆ ಸಂಬಂಧಿಸಿದ ಕೆಲಸ ಮಾಡುವವರಿಗೆ ಉತ್ತಮ ಧನಲಾಭ ಉಂಟಾಗಲಿದೆ. ನೌಕರವರ್ಗಕ್ಕೆ ಸೇರಿದ ಜನರಿಗೆ ಪ್ರಮೋಷನ್ ಹಾಗೂ ಇಂಕ್ರಿಮೆಂಟ್ ಭಾಗ್ಯ ಸಿಗಲಿದೆ. ನಿರುದ್ಯೋಗಿಗಳಿವೆ ಹೊಸ ನೌಕರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಘನತೆ ಗೌರವ ಹೆಚ್ಚಾಗಲಿದೆ. (ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link