ನೂರು ವರ್ಷಗಳ ಬಳಿಕ ಗುರು-ಶುಕ್ರರಿಂದ ಸಮಸಪ್ತಕ ಯೋಗ ರಚನೆ, ಈ ಜನರ ಜೀವನದಲ್ಲಿ ಶುಕ್ರದೆಸೆ ಆರಂಭ!

Mon, 04 Dec 2023-4:30 pm,

Guru Shukra Auspicious Yog 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗುರು ಹಾಗೂ ಶುಕ್ರ ಸೇರಿ ಸಮಸಪ್ತಕ ರಾಜಯೋಗ ನಿರ್ಮಿಸಿದ್ದಾರೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರ ವೃತ್ತಿ-ವ್ಯಾಪಾರ ಜೀವನ ಸೂರ್ಯನಂತೆ ಹೊಳೆಯಲಿದೆ. (Spiritual News In Kannada) 

ಧನು ರಾಶಿ: ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಶುಕ್ರನಿದ್ದು, ಪಂಚಮ ಸ್ಥಾನದಲ್ಲಿ ದೇವಗುರು ಬೃಹಸ್ಪತಿ ಇದ್ದಾನೆ. ಹೀಗಾಗಿ ಸಮಸಪ್ತಕ ರಾಜಯೋಗದಿಂದ ನಿಮಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಪ್ಲಾನಿಂಗ್ ಮಾಡಬಹುದು. ಒಂದು ವೇಳೆ ನಿಮಗೆ ಮಕ್ಕಳಿದ್ದರೆ ಅವರ ವಿವಾಹ ನೆರವೇರಬಹುದು ಅಥವಾ ಅವರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಬಹುದು. ಹೊಸ ಕೆಲಸ ಆರಂಭಿಸಲು ಈ ಸಮಯ ಸೂಕ್ತವಾಗಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಧನಲಾಭ ಉಂಟಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಸಮಯ ಉತ್ತಮವಾಗಿದೆ. 

ಕುಂಭ ರಾಶಿ: ಸಮಸಪ್ತಕ ರಾಜಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ವ್ಯಾಪಾರದಲ್ಲಿ ಉನ್ನತಿಯಾಗಲಿದೆ. ಅದೃಷ್ಟದ ಸಂಪೂರ್ಣ ಬೆಂಬಲ ನಿಮಗೆ ಇರಲಿದೆ. ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಸ್ನೇಹಿತರಿಂದ ಬೆಂಬಲ ಪಡೆಯುವಿರಿ. ಸುಖ-ಸೌಕರ್ಯಗಳು ಹೆಚ್ಚಾಗಲಿವೆ. ಗುರು ತೃತಿಯ ಭಾವದಲ್ಲಿರುವ ಕಾರಣ ನಿಮಗೆ ಸಹೋದರ-ಸಹೋದರಿಯರ ಬೆಂಬಲ ಸಿಗಲಿದೆ. ಅವರ ಉನ್ನತಿ ಕೂಡ ನೆರವೇರಲಿದೆ. 

ಕರ್ಕ ರಾಶಿ: ಶುಕ್ರ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸುತ್ತಿದ್ದಾನೆ. ಹೀಗಾಗಿ ಸುಖ ಸೌಕರ್ಯಗಳು ಹೆಚ್ಚಾಗಲಿವೆ. ಪ್ರಾಪರ್ಟಿ, ಮನೆ, ವಾಹನ ಸುಖ ಪ್ರಾಪ್ತಿಯಾಗುವ ಸಾಧ್ಯತೆಗಳಿವೆ. ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗಲಿದೆ. ನೌಕರಿ ಹಾಗೂ ವ್ಯಾಪಾರದಲ್ಲಿ ಭಾರಿ ಧನಲಾಭದ ಸಂಕೇತಗಳು ಗೋಚರಿಸುತ್ತಿವೆ. ವೈವಾಹಿಕ ಜೀವನ ಉತ್ತಮವಾಗಿರಲಿದೆ. ಶುಕ್ರದೇವನ ಕೃಪೆಯಿಂದ ಈ ರಾಶಿಯ ಜನರಿಗೆ ಹೊಸ ವರ್ಷದಲ್ಲಿ ವಿವಾಹ ಯೋಗ ಕೂಡ ರೂಪುಗೊಳ್ಳುತ್ತಿದೆ ಮತ್ತು ನಿಮಗೆ ಶುಭಫಲಗಳು ಪ್ರಾಪ್ತಿಯಾಗಲಿವೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link