ಚಂದ್ರಗ್ರಹಣದ ಬಳಿಕ ರಾಹು-ಕೇತು ಹಾಗೂ ಶನಿ ನಡೆಯಲ್ಲಿ ಬದಲಾವಣೆ, 3 ರಾಶಿಗಳ ಜನರಿಗೆ ಲಕ್ಷ್ಮಿನಾರಾಯಣ ಕೃಪೆಯಿಂದ ಅಪಾರ ಧನ-ಸಂಪತ್ತು ಯಶಸ್ಸು ಪ್ರಾಪ್ತಿ!
Saturn-Rahu-Ketu Transit 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ರಾಹು-ಕೇತು ಹಾಗೂ ಶನಿ ನಡೆ ಪರಿವರ್ತನೆಯಾಗಲಿದ್ದು, ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಅಪಾರ ಧನಸಂಪತ್ತು ಮತ್ತು ಯಶಸ್ಸು ಪ್ರಾಪ್ತಿಯಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,
ಕರ್ಕ ರಾಶಿ - ನಿಮ್ಮ ಪಾಲಿಗೆ ಈ ಮೂರು ಗ್ರಹಗಳ ಸ್ಥಿತಿಗತಿ ಬದಲಾವಣೆ ಸಾಕಷ್ಟು ಲಾಭ ತಂದುಕೊಡಲಿದೆ. ಈ ಅವಧಿಯಲ್ಲಿ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ಈ ಅವಧಿಯಲ್ಲಿ ನಿಮ್ಮ ನಿಂತು ಹೋದ ಕೆಲಸಗಳು ಪುನಃ ಆರಂಭಗೊಳ್ಳಲಿವೆ. ಇದರಿಂದ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳವನ್ನು ನೀವು ಕಾಣುವಿರಿ. ಈ ಅವಧಿಯಲ್ಲಿ ನಿಮಗೆ ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ಲಾಭ ಸಿಗಲಿದೆ. ನಿಮ್ಮ ಹಲವು ಯೋಜನೆಗಳು ಯಶಸ್ವಿಯಾಗಳಿವೆ. ಕೆಲಸ ಕಾರ್ಯಗಳಲ್ಲಿ ನಿಮಗೆ ಕಾರ್ಯ ಸಿದ್ಧಿ ಪ್ರಾಪ್ತಿಯಾಗಲಿದೆ. ಇಚ್ಛೆ ಆಕಾಂಕ್ಷೆಗಳು ಪೂರ್ಣಗೊಳ್ಳಲಿವೆ.
ಮಿಥುನ ರಾಶಿ: ಮೂರೂ ಗ್ರಹಗಳ ಮಹಾಪರಿವರ್ತನೆ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಗಲಿವೆ. ಈ ಅವಧಿಯಲ್ಲಿ ನಿಮ್ಮ ಭಾಗ್ಯ ಬದಲಾಗಲಿದೆ. ಹೂಡಿಕೆಯಿಂದ ಅಪಾರ ಲಾಭ ಸಿಗಲಿದೆ. ಆದಾಯದಲ್ಲಿ ಹೆಚ್ಚಳವನ್ನು ಕಾಣುವಿರಿ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭದ ಯೋಗವಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಬಾಳಸಂಗಾತಿಯ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರಾ ಸಂಭವಿಸುವ ಸಾಧ್ಯತೆ ಇದ್ದು, ಅದು ನಿಮಗೆ ಶುಭ ಫಲಗಳನ್ನು ನೀಡಲಿದೆ.
ಸಿಂಹ ರಾಶಿ- ಮೂರುಗ್ರಹಗಳ ಮಹಾಪರಿವರ್ತನೆ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರವಾಗಿದೆ. ನಿಮಗೆ ಈ ಅವಧಿಯಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ. ಜೊತೆಗೆ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ವ್ಯಾಪಾರಿಗಳಿಗೆ ಆಕಸ್ಮಿಕ ಧನಪ್ರಾಪ್ತಿಯ ಯೋಗ ರೂಪುಗೊಳ್ಳುತ್ತಿದೆ, ಇದರಿಂದ ವ್ಯಾಪಾರದಲ್ಲಿ ನೀವು ಉನ್ನತಿಯನ್ನು ಸಾಧಿಸುವಿರಿ. ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಸರ್ಕಾರಿ ನೌಕರಿಗಾಗಿ ಸಿದ್ಧತೆ ನಡೆಸುತ್ತಿರುವವರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ನೌಕರವರ್ಗದ ಜನರಿಗೆ ವೃತ್ತಿಜೀವನಕ್ಕೆ ಸಂಬಂಧಿಸಿದ ಮಹತ್ವದ ಸುದ್ದಿ ಸಿಗುವ ಸಾಧ್ಯತೆ ಇದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)