ಒಂದು ವರ್ಷದ ಬಳಿಕ ಶುಕ್ರನಿಂದ ನೀಚ್ ಭಂಗ್ ರಾಜಯೋಗ ರಚನೆ, ಶುಕ್ರದೆಸೆಯಿಂದ ಈ ಜನರ ಮೇಲೆ ಭಾರಿ ಕನಕವೃಷ್ಟಿ!
Neech Bhang Rajyog 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಶುಕ್ರ ಕನ್ಯಾ ರಾಶಿಗೆ ಪ್ರವೇಶಿಸಲಿದ್ದು, ಇದರಿಂದ ಮೂರು ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. (Spiritual News In Kannada)
ಮಕರ ರಾಶಿ: ಶನಿ ನಿಮ್ಮ ರಾಶಿಗೆ ಅಧಿಪತಿ ಮತ್ತು ಶುಕ್ರ ಶನಿಯ ಮಿತ್ರನಾಗಿದ್ದಾನೆ. ನೀಚ್ ಭಂಗ್ ರಾಜಯೋಗದ ಅವಧಿಯಲ್ಲಿ ಶುಕ್ರ ನಿಮ್ಮ ಜಾತಕದ ನವಮಭಾವದಲ್ಲಿ ಸಂಚರಿಸಲಿದ್ದಾನೆ. ಇದು ನಿಮ್ಮ ಅದೃಷ್ಟದಲ್ಲಿ ವಿಶೇಷ ಮೆರಗು ನೀಡಲಿದೆ. ಈ ಅವಧಿಯಲ್ಲಿ ನಿಂತುಹೋದ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ ವ್ಯಾಪಾರದಲ್ಲಿ ನಡೆದುಕೊಂಡು ಬಂದ ಎಲ್ಲಾ ಅಡೆತಡೆಗಳು ನಿವಾರಣೆಯಾಗಲಿವೆ. ಕೆಲಸದ ನಿಮಿತ್ತ ಸಣ್ಣಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದ್ದು, ಅವು ನಿಮ್ಮ ಪಾಲಿಗೆ ಶುಭ ಸಾಬೀತಾಗಲಿವೆ. ಒಂದು ವೇಳೆ ನಿಮ್ಮ ವ್ಯಾಪಾರ ವಿದೇಶಕ್ಕೆ ಸಂಬಂಧಿಸಿದ್ದಾಗಿದ್ದರೆ, ನಿಮಗೆ ಹೊಸ ಪ್ರಸ್ತಾಪಗಳು ಸಿಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಈ ಸಮಯ ಸಾಕಷ್ಟು ಅನುಕೂಲಕರವಾಗಿದೆ.
ಸಿಂಹ ರಾಶಿ: ನೀಚ್ ಭಂಗ್ ರಾಜಯೋಗದ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ದ್ವಿತೀಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗುವ ಸಾಧ್ಯತೆ ಇದ್ದು, ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲಿಷ್ಟವಾಗಿರಲಿದೆ. ಇನ್ನೊಂದೆಡೆ ಇದರಿಂದ ನಿಮ್ಮ ಭಾಗ್ಯ ಪರಿವರ್ತನೆ ಕೂಡ ಆಗಲಿದ್ದು, ನಿಮಗೆ ಎಂದಿಗೂ ಕೂಡ ಹಣಕಾಸಿನ ಮುಗ್ಗಟ್ಟು ಎದುರಾಗುವುದಿಲ್ಲ. ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು, ಚೈತನ್ಯ ಕಾಣಲು ನಿಮಗೆ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಸುಖ ಸಮೃದ್ಧಿಯ ಯೋಗ ನಿರ್ಮಾಣಗೊಳ್ಳುತಿದೆ. ಬಾಳಸಂಗಾತಿಯ ಜೊತೆಗಿನ ನಿಮ್ಮ ಸಂಬಂಧ ಸಾಕಷ್ಟು ಸುಮಧುರವಾಗಿರಲಿದೆ. ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದೆ.
ಧನು ರಾಶಿ: ನೀಚ್ ಭಂಗ್ ರಾಜಯೋಗದ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಹೊಸ ಹೊಳಪು ಇರಲಿದೆ. ಇನ್ನೊಂದೆಡೆ ನಿಮ್ಮ ಘನತೆ - ಗೌರವ - ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ನೌಕರ ವರ್ಗದ ಜನರಿಗೆ ಪ್ರಮೋಷನ್-ವೇತನ ಹೆಚ್ಚಳದ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಯಶಸ್ಸಿನ ಯೋಗ ನಿರ್ಮಾಣಗೊಳ್ಳುತ್ತಿದೆ. ಒಂದು ವೇಳೆ ನೀವು ವ್ಯಾಪಾರಿಗಳಾಗಿದ್ದರೆ, ಈ ಅವಧಿಯಲ್ಲಿ ಉತ್ತಮ ಆರ್ಡರ್ ಗಳು ನಿಮಗೆ ಸಿಗಲಿವೆ ಮತ್ತು ಅದರಿಂದ ನಿಮಗೆ ಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ತಂದೆಯ ಬೆಂಬಲ ಸಿಗಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)