ಹತ್ತು ವರ್ಷಗಳ ಬಳಿಕ ಕೇತು-ಶುಕ್ರರ ಶುಭ ಸಂಯೋಜನೆ, ಶುಕ್ರದೆಸೆಯಿಂದ ಈ ಜನರಿಗೆ ಸಿಗಲಿದೆ ಅಪಾರ ಧನ-ಸಂಪತ್ತು!
Ketu Shukra Yuti In Kanya 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕನ್ಯಾ ರಾಶಿಯಲ್ಲಿ ಕೇತು-ಶುಕ್ರರ ಶುಭ ಸಂಯೋಜನೆ ನೆರೆವೆರುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಅಪಾರ ಆರ್ಥಿಕ ಲಾಭ ಸಿಗಲಿದೆ. (Spiritual News In Kannada)
ಮೇಷ ರಾಶಿ: ಕೇತು-ಶುಕ್ರರ ಈ ಮೈತ್ರಿ ನಿಮ್ಮ ಜಾತಕದ ಶಷ್ಟಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಎಲ್ಲಾ ರೀತಿಯ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಹಾಗೂ ಹಣಕಾಸಿಗೆ ಸಂಬಂಧಿಸಿದ ಸಮಸ್ಯೆಗಳಿಂದ ನಿಮಗೆ ಮುಕ್ತಿ ಸಿಗಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭ ಉಂಟಾಗುವ ಸಾಧ್ಯತೆ ಇದ್ದು, ಇದರಿಂದ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆ ಇರಲಿದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ನಿಮಗೆ ಲಾಭ ಸಿಗಲಿದೆ. ಹಳೆ ಹೂಡಿಕೆಯಿಂದಲೂ ಕೂಡ ನಿಮಗೆ ಲಾಭ ಸಿಗಲಿದೆ.
ಸಿಂಹ ರಾಶಿ: ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ಈ ಮೈತ್ರಿ ರೂಪುಗೊಳ್ಳುತ್ತಿದೆ. ಇದರಿಂದ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ವೃದ್ದಿಯಾಗಲಿದೆ ಮತ್ತು ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಅಪಾರ ಸುಧಾರಿಸಲಿದೆ. ಈ ಅವಧಿಯಲ್ಲಿ ನಿಮಗೆ ಸಾಕಷ್ಟು ಘನತೆ-ಗೌರವ-ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ವ್ಯಾಪಾರಿಗಳು ನೀಡಿದ ಉದ್ರಿ ಹಣ ಅವರಿಗೆ ವಾಪಸ್ ಬರಲಿದೆ. ಆರೋಗ್ಯ ಉತ್ತಮವಾಗಿರಲಿದ್ದು, ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿವೆ, ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ.
ಕನ್ಯಾ ರಾಶಿ: ಶುಕ್ರ ಹಾಗೂ ಕೇತುಗಳ ಶುಭ ಸಂಯೋಜನೆ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಶುಕ್ರ-ಕೇತುವಿನ ಈ ಮೈತ್ರಿ ನಿಮ್ಮ ಗೋಚರ ಜಾತಕದ ಲಗ್ನ ಭಾವದಲಿ ನೆರವೇರಲಿದ್ದು, ಇದು ನಿಮ್ಮ ಆತ್ಮವಿಶ್ವಾಸವನ್ನು ಅಪಾರ ಹೆಚ್ಚಿಸಲಿದೆ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ ಹಾಗೂ ಕಾರ್ಯಕ್ಷೇತ್ರದಲ್ಲಿ ಉತ್ತಮ ಉನ್ನತಿಯಾಗಲಿದೆ. ಈ ಅವಧಿಯಲ್ಲಿ ನೀವು ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಇದರಿಂದ ನಿಮ್ಮ ಮನಸ್ಸು ಪ್ರಸನ್ನವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳದ ಸಂಕೇತಗಳಿದ್ದು, ಆದಾಯದ ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಲಿವೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)