ಸೂರ್ಯ ಗ್ರಹಣದ ಬಳಿಕ ಧನಿಷ್ಟಾ ನಕ್ಷತ್ರಕ್ಕೆ ಶನಿಯ ಎಂಟ್ರಿ, ಈ ಜನರ ಜೀವನದಲ್ಲಿ ಗೋಲ್ಡನ್ ಡೇಸ್ ಆರಂಭ!

Sun, 08 Oct 2023-1:36 pm,

Shani Dhanistha Nakshatra Gochar 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕರ್ಮ ಫಲದಾತ ಶನಿ ದೇವ ಶೀಘ್ರದಲ್ಲಿಯೇ ಧನಿಷ್ಟಾ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು 3 ರಾಶಿಗಳ ಜನರ ಜಾತಕದವರ ಜೀವನದಲ್ಲಿ ಗೋಲ್ಡನ್ ಡೇಸ್ ಆರಂಭಗೊಳ್ಳಲಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ (Spiritual News In Kannada),   

ಮೇಷ ರಾಶಿ: ಶನಿ ದೇವನ ಈ ನಕ್ಷತ್ರ ಪರಿವರ್ತನೆ ನಿಮ್ಮ ಪಾಲಿಗೆ ಅತ್ಯಂತ ಶುಭ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಶನಿದೇವ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಕಂಡುಬರುವ ಸಾಧ್ಯತೆ ಇದೆ. ಬಂಧು ಮಿತ್ರರ ಜೊತೆಗೆ ಎರ್ಪಟ್ಟ ಭಿನ್ನಾಭಿಪ್ರಾಯಗಳು ಶಮನಗೊಳ್ಳಲಿವೆ. ಆದಾಯದ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ನೌಕರವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹಿರಿಯ-ಕಿರಿಯರ ಬೆಂಬಲ ಸಿಗಲಿದೆ. ಈ ಅವಧಿಯಲ್ಲಿ ಒಂದು ವೇಳೆ ನೀವು ನೌಕರಿಯನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದರೆ, ಈ ಸಮಯ ನಿಮಗೆ ಉತ್ತಮವಾಗಿದೆ. ಈ ಅವಧಿಯಲ್ಲಿ ನಿಮಗೆ ಷೇರುಪೇಟೆ, ಲಾಟರಿ ವ್ಯವಹಾರಗಳಿಂದ ಲಾಭ ಸಿಗಲಿದೆ.  

ಮಿಥುನ ರಾಶಿ: ಶನಿ ದೇವನ ಧನಿಷ್ಟಾ ಗೋಚರ ನಿಮ್ಮ ಪಾಲಿಗೂ ಕೂಡ ಸಾಕಷ್ಟು ಅನುಕೂಲತೆಗಳನ್ನು ತರಲಿದೆ. ಏಕೆಂದರೆ ಈ ಅವಧಿಯಲ್ಲಿ ಶನಿ ಮಹಾರಾಜ ನಿಮ್ಮ ಗೋಚರ ಜಾತಕದ ಭಾಗ್ಯ ಸ್ಥಾನದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ವ್ಯಾಪಾರದಲ್ಲಿ ನಿಮಗೆ ಸಾಕಷ್ಟು ಲಾಭ ಸಿಗಲಿದೆ. ಈ ಅವಧಿಯಲ್ಲಿ ಸಣ್ಣಪುಟ್ಟ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವವರಿಗೆ ಶನಿದೇವನ ವಿಶೇಷ ಆಶೀರ್ವಾದ ಲಭಿಸಲಿದೆ. ಅರ್ಥಾತ್ ನೌಕರಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಧರ್ಮ-ಕರ್ಮಗಳತ್ತ ನಿಮ್ಮ ಒಲವು ಹೆಚ್ಚಾಗುವ ಸಾಧ್ಯತೆ ಇದೆ.   

ವೃಶ್ಚಿಕ ರಾಶಿ: ಶನಿಯ ಈ ಧನಿಷ್ಟಾ ಗೋಚರ ನಿಮ್ಮ ಪಾಲಿಗೂ ಕೂಡ ಅದೃಷ್ಟವನ್ನು ಹೊತ್ತುತರಲಿದೆ. ಏಕೆಂದರೆ ಈ ಅವಧಿಯಲ್ಲಿ ಕರ್ಮಫಲದಾತ ನಿಮ್ಮ ಗೋಚರ ಜಾತಕದ ಚತುರ್ಥ ಬ್ಯಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ. ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಇದರ ಜೊತೆಗೆ ಶಾರೀರಿಕ ಹಾಗೂ ಮಾನಸಿಕ ಸುಖ ಕೂಡ ಸಿಗಲಿದೆ. ಮಕ್ಕಳ ಕಡೆಯಿಂದ ನಿಮಗೆ ಒಳ್ಳೆಯ ಸುದ್ದಿ ಸಿಗುವ ಸಾಧ್ಯತೆ ಇದೆ. ಶನಿ ದೇವನ ಕೃಪೆಯಿಂದ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಘನತೆ-ಗೌರವ, ಸ್ಥಾನಮಾನ ಈ ಅವಧಿಯಲ್ಲಿ ಹೆಚ್ಚಾಗಲಿದೆ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link