Auspicious Drushti Sambandh: ಎರಡು ಶತಮಾನಗಳ ಬಳಿಕ ರೂಪುಗೊಂಡ ಗುರು, ಶುಕ್ರ ಹಾಗೂ ಶನಿಯ ಶುಭ ದೃಷ್ಠಿ ಸಂಬಂಧ, 4 ರಾಶಿಗಳ ಜನರಿಗೆ ಭಾರಿ ಧನಲಾಭ-ಭಾಗ್ಯೋದಯ ಯೋಗ!

Wed, 12 Apr 2023-1:39 pm,

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯ ಜಾತಕದವರ ಪಾಲಿಗೆ ಶುಕ್ರ, ಗುರು ಹಾಗೂ ಶನಿದೇವನ ಶುಭ ದೃಷ್ಠಿ ಸಂಬಂಧ ಲಾಭಪ್ರದ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಬೆಂಬಲ ಸಿಗಲಿದೆ. ಹೊಸ ಬಿಸ್ನೆಸ್ ಆರಂಭಿಸಲು ಈ ಸಮಯ ಉತ್ತಮವಾಗಿದೆ. ದಾಂಪತ್ಯ ಜೀವನದಲ್ಲಿ ಸುಖ ಹೆಚ್ಚಾಗಲಿದೆ. ಕೆಲಸ ಕಾರ್ಯಗಳಲ್ಲಿ ಬರುತ್ತಿದ್ದ ಅಡೆತಡೆಗಳು ದೂರಾಗಲಿವೆ. ವೃತ್ತಿಜೀವನದಲ್ಲಿ ಯಶಸ್ಸು ಸಿಗುವ ಯೋಗವಿದೆ. ಇನ್ನೊಂದೆಡೆ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ.   

ಕುಂಭ ರಾಶಿ: ಗುರು, ಶುಕ್ರ ಹಾಗೂ ಶನಿದೇವನ ಈ ಶುಭ ದೃಷ್ಠಿ ಸಂಬಂಧ ಕುಂಭ ರಾಶಿಯ ಜಾತಕದವರ ಪಾಲಿಗೆ ಅತ್ಯಂತ ಶುಭ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಭಾಗ್ಯದ ಬೆಂಬಲ ಸಿಗಲಿದೆ. ಹೊಸ ವಾಹನ, ಆಸ್ತಿಯನು ಖರೀದಿಸಲು ಮನಸ್ಸು ಮಾಡುವಿರಿ. ಇನ್ನೊಂದೆಡೆ ಶುಕ್ರನ ದೆಸೆಯಿಂದ ನಿಮಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಸುಖ-ಸೌಕರ್ಯಗಳು ಹೆಚ್ಚಾಗಲಿವೆ. ಆಸ್ತಿ ಪಾಸ್ತಿ ವ್ಯವಹಾರಕ್ಕೆ ಈ ಸಮಯ ಅನುಕೂಲಕರವಾಗಿದೆ.  

ಮೇಷ ರಾಶಿ: ಶನಿ, ಗುರು ಹಾಗೂ ಶುಕ್ರರ ಶುಭ ದೃಷ್ಠಿ ಸಂಬಂಧ ಮೇಷ ರಾಶಿಯ ಜಾತಕದವರ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಅಪಾರ ಧನಲಾಭವಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಯಾವುದಾದರೊಂದು ಆಸ್ತಿ-ವಾಹನ ಖರೀದಿಸುವ ಸಾಧ್ಯತೆ ಇದೆ. ನಿಮಗೆ ಸುಖ ಶಾಂತಿ ಪ್ರಾಪ್ತಿಯಾಗಲಿದೆ. ನಿಮ್ಮ ಎಲ್ಲಾ ಬಯಕೆಗಳು ಈಡೇರಲಿವೆ. ಎಲ್ಲಾ ಕೆಲಸ ಕಾರ್ಯಗಳಲ್ಲಿ ನಿಮಗೆ ಕಾರ್ಯಸಿದ್ಧಿ ಪ್ರಾಪ್ತಿಯಾಗಲಿದೆ. ಬಾಳಸಂಗಾತಿಯ ಉನ್ನತಿ ಈ ಅವಧಿಯಲ್ಲಿ ಸಾಧ್ಯವಾಗಲಿದೆ.  

ಸಿಂಹ ರಾಶಿ: ಮೂರು ದೊಡ್ಡ ಗ್ರಹಗಳ ಈ ಶುಭ ದೃಷ್ಠಿ ಸಂಬಂಧ ಸಿಂಹ ರಾಶಿಯ ಜನರ ಪಾಲಿಗೆ ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ನೌಕರಿಯಲ್ಲಿ ಯಶಸ್ಸು ಲಭಿಸುವ ಯೋಗವಿದೆ. ವ್ಯಾಪಾರದಲ್ಲಿ ನಿರತರಾದವರಿಗೆ ಬಿಸ್ನೆಸ್ ನಲ್ಲಿ ಅಪಾರ ಲಾಭ ಸಿಗಲಿದೆ. ನೌಕರವರ್ಗದ ಜನರಿಗೆ ವೃತ್ತಿ ಜೀವನದಲ್ಲಿ ಉನ್ನತಿಯಾಗುವ ಸಾಧ್ಯತೆ ಇದೆ. ಕಾರ್ಯಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ಸಿಗುವ ನಿರೀಕ್ಷೆ ಇದೆ. ಹಣಕಾಸಿಗೆ ಸಂಬಂಧಿಸಿದ ಚಿಂತೆ ದೂರಾಗಲಿದೆ ಮತ್ತು ಪ್ರೇಮ ಸಂಬಂಧಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link