ಗೋಲ್ಡನ್‌ ಟೆಂಪಲ್‌ನಲ್ಲಿ ಪತ್ನಿ ಹುಟ್ಟುಹಬ್ಬ ಆಚರಿಸಿದ ಅಲ್ಲು ಅರ್ಜುನ್..!

Thu, 29 Sep 2022-6:07 pm,

ಗೋಲ್ಡನ್ ಟೆಂಪಲ್‌ನಲ್ಲಿ ಮಕ್ಕಳು, ಪತ್ನಿ ಜೊತೆ ಇರುವ ಫೋಟೋವನ್ನು ಅಲ್ಲು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಫೋಟೋಸ್‌ ನೋಡಿದ ಅಭಿಮಾನಿಗಳು ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಹೆಂಡತಿ ಮತ್ತು ಮಕ್ಕಳೊಂದಿಗೆ ಸಾಂಪ್ರದಾಯಿಕ ಉಡುಗೆ ಧರಿಸಿ ದೇವಸ್ಥಾನವನ್ನು ಪ್ರವೇಶಿಸುತ್ತಿರುವುದನ್ನು ನಾವು ಫೋಟೋದಲ್ಲಿ ಕಾಣಬಹುದು. ಮಗಳು ಅಲ್ಲು ಅರ್ಹ, ಮಗ ಅಲ್ಲು ಆಯಾನ್‌ ಪತ್ನಿ ಸ್ನೇಹಾ ಜೊತೆ ದೇವರ ದರ್ಶನ ಪಡೆದಿದ್ದಾರೆ.

ಪ್ರಸ್ತುತ, ಪ್ಯಾನ್‌ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ಯಶಸ್ಸಿನಲ್ಲಿದ್ದಾರೆ. ಅಲ್ಲದೆ, ಪುಷ್ಪ 2 ರ ಆರಂಭದ ನಿರೀಕ್ಷೆಯಲ್ಲಿದ್ದಾರೆ. ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ಅಭಿನಯದ ಪುಷ್ಪ: ದಿ ರೈಸ್ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿತ್ತು.

ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿಯಿತು. ಇನ್ನು ಇತ್ತೀಚಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಇಂಡಿಯಾ ಡೇ ಪರೇಡ್‌ನಲ್ಲಿ ಗ್ರ್ಯಾಂಡ್ ಮಾರ್ಷಲ್ ಆಗಿ ಅಲ್ಲು ಜಾಗತಿಕವಾಗಿ ಭಾರತವನ್ನು ಪ್ರತಿನಿಧಿಸಿದರು. ಇದು ಅಭಿಮಾನಿಗಳಿಗೆ ಖುಷಿ ನೀಡಿತ್ತು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link