Coconut Water Benefits: ನಿತ್ಯ ಎಳನೀರು ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

Mon, 01 Jul 2024-3:21 pm,

ಎಳನೀರಿನಲ್ಲಿ ದೇಹಕ್ಕೆ ಅಗತ್ಯವಾದ ಪೊಟ್ಯಾಸಿಯಮ್, ಮೆಗ್ನೀಸಿಯಮ್, ಎಲೆಕ್ಟ್ರೋಲೈಟ್, ಕ್ಯಾಲ್ಸಿಯಂನಂತಹ ಹಲವು ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿಯೇ, ಅನಾರೋಗ್ಯದ ಸಂದರ್ಭದಲ್ಲಿ ಎಳನೀರು ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಆದರೆ, ಅನಾರೋಗ್ಯದ ವೇಳೆಯಷ್ಟೇ ಅಲ್ಲ ಆರೋಗ್ಯವಾಗಿದ್ದಾಗಲೂ ಎಳೆನೀರು ಕುಡಿಯುವುದು ಒಳ್ಳೆಯದು. 

ಮೊದಲೇ ತಿಳಿಸಿದಂತೆ ಎಳನೀರಿನಲ್ಲಿ ದೇಹಕ್ಕೆ ಅಗತ್ಯವಿರುವ ಲವಣ, ವಿಟಮಿನ್ ಮತ್ತು ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿ, ತಿಂಗಳಕಾಲ ಪ್ರತಿ ದಿನ ಒಂದು ಲೋಟ ಎಳನೀರು ಕುಡಿಯುವುದರಿಂದ ಇದು ಆರೋಗ್ಯಕ್ಕೆ ಹಲವು ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಅವುಗಳೆಂದರೆ...   

ಪ್ರತಿದಿನ ಒಂದು ಲೋಟ ಎಳನೀರನ್ನು ಕುಡಿಯುವುದರಿಂದ ಮಾನಸಿಕ ಒತ್ತಡದಿಂದ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ. 

ಒಂದು ಕಪ್ ಎಳನೀರಿನಲ್ಲಿ ಕೇವಲ 48% ಕ್ಯಾಲೋರಿ ಇರುತ್ತದೆ. ಹಾಗಾಗಿ ಎಳನೀರು ಕುಡಿಯುವುದರಿಂದ ದೇಹಕ್ಕೆ ತ್ವರಿತ ಶಕ್ತಿ ದೊರೆಯುತ್ತದೆ. ಆದರೆ, ಇದು ಸುಲಭವಾಗಿ ಜೀನವಾಗುತ್ತದೆ. ಇದರಿಂದಾಗಿ ತೂಕ ಇಳಿಕೆಗೆ ಸಹಾಯಕವಾಗುತ್ತದೆ. 

ಎಳನೀರಿನಲ್ಲಿ ಪೊಟ್ಯಾಸಿಯಮ್ ಅಧಿಕಾವಿದ್ದು, ಇದು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಲು ಸಹಾಯಕವಾಗಿದೆ. ಹಾಗಾಗಿ ಹೃದ್ರೋಗದಿಂದ ಬಳಲುತ್ತಿರುವವರಿಗೆ ಎಳನೀರು ದಿವ್ಯೌಷಧ ಎಂದು ಪರಿಗಣಿಸಲಾಗುತ್ತದೆ. 

ಎಳ ನೀರಿನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಎಲೆಕ್ಟ್ರೋಲೈಟ್‌ಗಳಂತಹ ಖನಿಜಗಳು ಹೇರಳವಾಗಿ ಕಂಡು ಬರುತ್ತದೆ. ಹಾಗಾಗಿ ಆಯಾಸ ಮತ್ತು ನಿರ್ಜಲೀಕರಣದಂತಹ ಸಂದರ್ಭದಲ್ಲಿ ಎಳನೀರಿನ ಸೇವನೆಯಿಂದ ತ್ವರಿತ ಶಕ್ತಿ ದೊರೆಯುತ್ತದೆ. 

ನಿತ್ಯ ಎಳನೀರನ್ನು ಕುಡಿಯುವುದು ಕಿಡ್ನಿ ಸ್ಟೋನ್ ಸಮಸ್ಯೆ ಇರುವವರಿಗೆ ಹೆಚ್ಚು ಪ್ರಯೋಜನಕಾರಿ. 

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link