Ananya Pandey: ಪಡ್ಡೆ ಹುಡುಗರ ಮನಗೆದ್ದ ಅನನ್ಯಾ ಪಾಂಡೆ ಫೋಟೋಸ್
ಅನನ್ಯಾ ಪಾಂಡೆ ಈ ವರ್ಷದ ಆರಂಭದಲ್ಲಿ 'ಗೆಹ್ರಿಯನ್' ಚಿತ್ರದಲ್ಲಿ ನಟಿಸುವ ಮೂಲಕ ಪ್ರೇಕ್ಷಕರನ್ನು ಮನರಂಜಿಸಿದ್ದರು. ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಈಗ ಹಲವಾರು ಚಿತ್ರಗಳಲ್ಲಿ ನಟಿಸುವುದರಲ್ಲಿ ಬ್ಯುಸಿಯಾಗಿದ್ದಾರೆ.
ನಟಿ ಅನನ್ಯಾ ಪಾಂಡೆ ಇತ್ತೀಚಿನ ದಿನಗಳಲ್ಲಿ ಬಾಲಿವುಡ್‌ನಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ನಟಿ. ನಟ ಚಂಕಿ ಪಾಂಡೆ ಅವರ ಪುತ್ರಿಯಾಗಿದ್ದು, ಅವರು 2019 ರಲ್ಲಿ ಸ್ಟೂಡೆಂಟ್ ಆಫ್ ದಿ ಇಯರ್ 2 ಸಿನಿಮಾದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆ ಬಳಿಕ ಪತಿ ಪತ್ನಿ ಔರ್ ವೊಹ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇದೀಗ ಬಾಲಿವುಡ್ ನಟಿ ಅನನ್ಯಾ ಪಾಂಡೆ ತಮ್ಮ ಗ್ಲಾಮರಸ್ ಲುಕ್‌ನ ಮೂಲಕ ಸುದ್ದಿಯಲ್ಲಿದ್ದಾರೆ. ಅವರ ಮಾದಕ ನೋಟ ಬೀರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಮ್ಮ ವಿಶಿಷ್ಟ ನೋಟದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನಗೆದ್ದಿದ್ದಾರೆ.
ಫೋಟೋಗಳಲ್ಲಿ ತುಂಬಾ ಗ್ಲಾಮರಸ್ ಆಗಿ ಕಂಡಿರುವ ಅನನ್ಯಾ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.