ʼಅನಿಮಲ್‌ʼ ಸಿನಿಮಾದ ನಟ-ನಟಿಯರ ಸಂಭಾವನೆ ಎಷ್ಟು ಗೊತ್ತೆ..? ಸಂಪೂರ್ಣ ವಿವರ ಇಲ್ಲಿದೆ

Animal actors remuneration : ಡಿ.1 ರಂದು ಬಿಡುಗಡೆಯಾದ ಸಂದೀಪ್‌ ರೆಡ್ಡಿ ವಂಗಾ ನಿರ್ದೇಶನದ ʼಅನಿಮಲ್ʼ ಮೂವಿ ಈಗಾಗಲೇ 300 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ಈ ಸಿನಿಮಾದಲ್ಲಿ ನಟಿಸಿದ ನಟಿ ನಟಿಯರ ಸಂಭಾವನೆ ಕುರಿತ ಅಪ್‌ಡೆಟ್‌ ಹೊರಬಿದ್ದಿದೆ. ಬನ್ನಿ ಅದೇನು ಅಂತ ನೋಡೋಣ..
 

1 /7

ಬಾಲಿವುಡ್‌ ನಟ ರಣಬೀರ್ ಕಪೂರ್ ಅನಿಮಲ್‌ ಸಿನಿಮಾದಲ್ಲಿ ನಟಿಸಲು ಬರೋಬ್ಬರಿ 35 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗಿದೆ.  

2 /7

ರಣಬೀರ್‌ಗೆ ನಾಯಕಿಯಾಗಿ ನಟಿಸಿರುವ ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಟಿಸಲು 7 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.   

3 /7

ಅನಿಮಲ್‌ ಸಿನಿಮಾದಲ್ಲಿ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಬಿ ಡಿಯೋಲ್ ಸಂಭಾವನೆ ಈ ಚಿತ್ರದಲ್ಲಿ ನಟಿಸಲು ಬರೋಬ್ಬರಿ 4 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.  

4 /7

ರಣಬೀರ್‌ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್‌ ಹಿರಿಯ ನಟ ಅನಿಲ್ ಕಪೂರ್ ಅನಿಮಲ್‌ನಲ್ಲಿ ನಟಿಸಲು 2 ಕೋಟಿ ಸಂಭಾವನೆ ಪಡೆದಿದ್ದಾರಂತೆ.  

5 /7

ಅನಿಮಲ್‌ ಸಿನಿಮಾ ಡಿ.1 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.   

6 /7

ಅರ್ಜುನ್‌ ರೆಡ್ಡಿ ಖ್ಯಾತಿಯ ಸಂದೀಪ್‌ ರೆಡ್ಡಿ ವಂಗಾ ʼಅನಿಮಲ್ʼಗೆ ಆಕ್ಷನ್‌ ಕಟ್‌ ಹೇಳಿದ್ದಾರೆ.  

7 /7

ಅನಿಮಲ್‌ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಈಗಾಗಲೇ 300 ಕೋಟಿಗೂ ಹೆಚ್ಚು ಕಲೇಕ್ಷನ್‌ ಮಾಡಿದೆ.