Anjeer Benefits: ಅಂಜೂರ ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳು
ರಕ್ತಹೀನತೆ ಇರುವವರು ಪ್ರತಿನಿತ್ಯ 2 ರಿಂದ 4 ಅಂಜೂರ ಹಣ್ಣುಗಳನ್ನು ಸೇವನೆ ಮಾಡುವುದರಿಂದ ರಕ್ತ ವೃದ್ಧಿಯಾಗುತ್ತದೆ.
ಅಂಜೂರ ಹಣ್ಣಿನಲ್ಲಿ ವಿಟಮಿನ್ ‘ಎ’ ಮತ್ತು ‘ಸಿ’ ಅಧಿಕವಾಗಿರುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ರಾತ್ರಿ ವೇಳೆ 3-5 ಅಂಜೂರದ ಹಣ್ಣನ್ನು ನೀರಿನಲ್ಲಿ ನೆನೆಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಬಳಿಕ ಹಾಲು ಕುಡಿದರೆ ಮೂಲವ್ಯಾಧಿ ಸಮಸ್ಯೆ ಗುಣವಾಗುತ್ತದೆ.
ಅಂಜೂರ ಹಣ್ಣಿನಲ್ಲಿ ನಾರಿನಾಂಶ ಅಧಿಕವಾಗಿರುವುದರಿಂದ ಮಲಬದ್ಧತೆಯ ಸಮಸ್ಯೆ ನಿವಾರಣೆಯಾಗುತ್ತದೆ.
ಅಂಜೂರ ಹಣ್ಣು ಸೇವನೆಯಿಂದ ಶರೀರದಲ್ಲಿ ಹೊಸ ಚೈತನ್ಯ ಬರುತ್ತದೆ. ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ನರನಾಡಿಗಳಲ್ಲಿ ಚೈತನ್ಯ ತುಂಬುತ್ತದೆ.