Benefits Of Castor Oil In Belly Button: ಹೊಕ್ಕುಳಕ್ಕೆ ಎಣ್ಣೆಯನ್ನು ಹಚ್ಚುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇದರಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಶಾಶ್ವತ ಪರಿಹಾರ ಸಿಗುತ್ತದೆ.
Benefits Of Castor Oil In Belly Button : ಆಯುರ್ವೇದದಲ್ಲಿ ಹೊಕ್ಕುಳನ್ನು ಶಕ್ತಿಯ ಕೇಂದ್ರ ಬಿಂದು ಎಂದು ಕರೆಯಲಾಗುತ್ತದೆ. ಹೊಕ್ಕುಳಲ್ಲಿ ಎಣ್ಣೆಯನ್ನು ಹಚ್ಚುವುದು ಆಯುರ್ವೇದದ ಪ್ರಕ್ರಿಯೆ. ಇದು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಸಾಸಿವೆ ಎಣ್ಣೆ, ಆಲಿವ್ ಎಣ್ಣೆ, ಬೇವಿನ ಎಣ್ಣೆ, ಕೊಬ್ಬರಿ ಎಣ್ಣೆ, ಮುಂತಾದ ಅನೇಕ ವಿಧದ ಎಣ್ಣೆಗಳನ್ನು ಹೊಕ್ಕುಳಕ್ಕೆ ಹಚ್ಚುವುದರಿಂದ ಅನೇಕ ರೀತಿಯಲ್ಲಿ ಪ್ರಯೋಜನವಾಗುತ್ತದೆ ಎಂದು ಆಯುರ್ವೇದ ಹೇಳುತ್ತದೆ. ಇದಲ್ಲದೆ, ಹೊಕ್ಕುಳಕ್ಕೆ ಹರಳೆಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನವಿದೆ. ನಿಯಮಿತವಾಗಿ ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದರಿಂದ ದೇಹದ ಅನೇಕ ಸಮಸ್ಯೆಗಳನ್ನು ತೊಡೆದುಹಾಕಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹೊಕ್ಕುಳಕ್ಕೆ ಹರಳೆಣ್ಣೆ ಹಚ್ಚುವ ಪ್ರಕ್ರಿಯೆ ತುಂಬಾ ಪ್ರಯೋಜನಕಾರಿ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಹರಳೆಣ್ಣೆಯನ್ನು ಪ್ರತಿದಿನ ಹೊಕ್ಕುಳಕ್ಕೆ ಹಚ್ಚುವುದರಿಂದ ಗ್ಯಾಸ್, ಮಲಬದ್ಧತೆ, ಹೊಟ್ಟೆ ಉಬ್ಬುವುದು ಮತ್ತು ಹೊಟ್ಟೆ ನೋವಿನಂತಹ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
ಹೆಚ್ಚಿನ ಮಹಿಳೆಯರು ಮುಟ್ಟಿನ ಸಮಯದಲ್ಲಿ ತೀವ್ರವಾದ ನೋವನ್ನು ಅನುಭವಿಸುತ್ತಾರೆ. ಅಂಥಹ ಪರಿಸ್ಥಿತಿಯಲ್ಲಿ, ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದರಿಂದ ಪಿರಿಯಡ್ಸ್ ಸಮಯದಲ್ಲಿ ಕಾಣಿಸಿಕೊಳ್ಳುವ ನೋವಿನಿಂದ ಪರಿಹಾರ ಸಿಗುತ್ತದೆ.
ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದರಿಂದ ಕೀಲುಗಳಲ್ಲಿನ ನೋವು ಮತ್ತು ಊತವನ್ನು ನಿವಾರಿಸಬಹುದು. ಸಂಧಿವಾತದಿಂದ ಉಂಟಾಗುವ ಕೀಲು ನೋವು ಊತ ಮತ್ತು ಸೆಳೆತದಿಂದ ಪರಿಹಾರವನ್ನು ಒದಗಿಸಲು ಇದು ಸಹಾಯ ಮಾಡುತ್ತದೆ.
ಹರಳೆಣ್ಣೆಯನ್ನು ಹೊಕ್ಕುಳಕ್ಕೆ ಹಚ್ಚುವುದರಿಂದ ಚರ್ಮ ಮತ್ತು ತುಟಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಮೊಡವೆ, ಅಲರ್ಜಿ ಮತ್ತು ಕಲೆಗಳಂತಹ ಚರ್ಮದ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.ಇದಲ್ಲದೇ ಪ್ರತಿ ರಾತ್ರಿ ಮಲಗುವ ಮುನ್ನ ಹೊಕ್ಕುಳಕ್ಕೆ ಹರಳೆಣ್ಣೆ ಹಚ್ಚುವುದರಿಂದ ತುಟಿಗಳು ಬಿರುಕು ಬಿಡುವುದನ್ನು ತಡೆಯಬಹುದು.
ಹರಳೆಣ್ಣೆಯನ್ನು ಹೊಕ್ಕುಳಕ್ಕೆ ಹಚ್ಚುವುದರಿಂದ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸಬಹುದು. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ಫಂಗಲ್ ಗುಣಗಳಿದ್ದು, ಇದು ಹಾನಿಕಾರಕ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. (ಸೂಚನೆ : ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.)