ಈ ಎಣ್ಣೆಯಲ್ಲಿ ಕರ್ಪೂರ ಬೆರಸಿ ಹಚ್ಚಿ: ಬಿಳಿ ಕೂದಲು 20 ನಿಮಿಷದಲ್ಲಿ ಬುಡದಿಂದಲೇ ಕಡುಕಪ್ಪಾಗಿ ದಷ್ಟ-ಪುಷ್ಟವಾಗಿ ಬೆಳೆಯುತ್ತೆ!
ಕರ್ಪೂರ ಎಣ್ಣೆ. ಇದನ್ನು ಕೂದಲಿಗೆ ಹಚ್ಚುವುದರಿಂದ ದಷ್ಟಪುಷ್ಟವಾದ ಕೋಮಲ ಕೂದಲು ನಿಮ್ಮದಾಗುತ್ತದೆ.
ಕರ್ಪೂರದ ಎಣ್ಣೆಯನ್ನು ಕೂದಲಿಗೆ ಹಚ್ಚಿದರೆ, ನೆತ್ತಿಯ ಚರ್ಮದಲ್ಲಿ ರಕ್ತದ ಹರಿವು ಸುಧಾರಿಸುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಜೊತೆಗೆ ಪೌಷ್ಟಿಕಾಂಶವನ್ನು ಪಡೆಯುವುದರಿಂದ ಕೂದಲಿನ ಬೇರುಗಳು ಬಲಗೊಳ್ಳುತ್ತವೆ.
ಕರ್ಪೂರವು ಆರ್ಧ್ರಕ ಗುಣಗಳನ್ನು ಹೊಂದಿದೆ. ಕೂದಲಿನ ಮೇಲೆ ಹಚ್ಚಿದರೆ ಅದು ಶುಷ್ಕತೆಯನ್ನು ತೆಗೆದುಹಾಕುತ್ತದೆ.
ಇನ್ನು ಕರ್ಪೂರವು ಆಂಟಿ-ಡ್ಯಾಂಡ್ರಫ್ ಅಂಶವಾಗಿದೆ. ಅದರ ಆಂಟಿ-ಫಂಗಲ್ ಗುಣವು ಉರಿಯೂತವನ್ನು ಕಡಿಮೆ ಮಾಡುತ್ತದೆ. ತೇವಾಂಶವನ್ನು ಒದಗಿಸುವ ಮೂಲಕ ನೆತ್ತಿಯನ್ನು ಆರೋಗ್ಯಕರವಾಗಿರಿಸುತ್ತದೆ.
ಮಾಲಿನ್ಯದಿಂದಾಗಿ ನೆತ್ತಿಯ ಮೇಲೆ ತುರಿಕೆ ಮತ್ತು ಸುಡುವ ಸಂವೇದನೆ ಇದ್ದರೆ, ಕರ್ಪೂರದ ಎಣ್ಣೆಯನ್ನು ಬಳಸಿ. ಇದು ನೈಸರ್ಗಿಕ ನೋವು ನಿವಾರಕ ಗುಣಗಳನ್ನು ಹೊಂದಿದೆ. ಯಾವುದೇ ರೀತಿಯ ಸೋಂಕಿನಿಂದ ಉಂಟಾಗುವ ತುರಿಕೆ ಮತ್ತು ಸುಡುವಿಕೆಯನ್ನು ಕಡಿಮೆ ಮಾಡುತ್ತದೆ.
ಕೂದಲು ಹೆಚ್ಚು ಉದುರುತ್ತಿದ್ದರೆ ಕರ್ಪೂರ ಎಣ್ಣೆಯನ್ನು ಹಚ್ಚಿ ಇದು ಕೂದಲನ್ನು ಬಲಪಡಿಸುವುದಲ್ಲದೆ. ಕೂದಲಿನ ಕಿರುಚೀಲಗಳು ಬಲಗೊಳ್ಳುವಂತೆ ಮಾಡುತ್ತದೆ. ಇನ್ನು ಬಿಳಿ ಕೂದಲಿನ ಸಮಸ್ಯೆಗೆ ಸಹ ಪ್ರಯೋಜನಕಾರಿಯಾಗಿದೆ. ಇದು ನಿಮ್ಮ ಕೂದಲನ್ನು ದೀರ್ಘಕಾಲದವರೆಗೆ ನೈಸರ್ಗಿಕವಾಗಿ ಕಪ್ಪಾಗಿಡಲು ಸಹಾಯ ಮಾಡುತ್ತದೆ.
ಕರ್ಪೂರ ಮತ್ತು ತೆಂಗಿನ ಎಣ್ಣೆಯನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ. ನಂತರ ನೆತ್ತಿ ಮತ್ತು ಕೂದಲಿನ ಬೇರುಗಳಿಗೆ ಹಚ್ಚಿ. 20 ರಿಂದ 30 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಶಾಂಪೂ ಬಳಸಿ ತೊಳೆಯಿರಿ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)