ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 2 ರಷ್ಟು ಮೀಸಲಾತಿ ನೀಡಲು ಸೂಕ್ತ ಕ್ರಮ -ಸಿಎಂ ಸಿದ್ದರಾಮಯ್ಯ

Wed, 18 Oct 2023-3:21 pm,

ಈಗ ನಮ್ಮ ರಾಜ್ಯದಿಂದ 8 ಜನ ಪದಕ ಪಡೆದಿದ್ದಾರೆ, ಸರ್ಕಾರ ಮತ್ತು ಏಳು ಕೋಟಿ ಕನ್ನಡಿಗರ ವತಿಯಿಂದ ಅಭಿನಂದನೆಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ಇದು ಅದ್ಭುತ ಸಾಧನೆ. ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿಯೂ ಹೆಚ್ಚೆಚ್ಚು ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸುತ್ತೇನೆ.

ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್‌ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಇನ್ನಷ್ಟು ಗೌರವ ಹೆಚ್ಚಲಿದೆ.ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಿದ್ದೆ. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು.

 

 

ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ದೇಶದ ಕ್ರೀಡಾಪಟುಗಳ ಸಾಧನೆ ದೇಶ ಮತ್ತು ರಾಜ್ಯದ ಗೌರವ ಹೆಚ್ಚಿಸಿದೆ. ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ವಿಷಯ.

ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link