ಸಿಡಿಎಸ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ಪತನ, ಇಲ್ಲಿದೆ ಘಟನೆಯ ಭಯಾನಕ ದೃಶ್ಯ

ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಬುಧವಾರ ಭಾರೀ ಅಪಘಾತ ಸಂಭವಿಸಿದೆ.

ನವದೆಹಲಿ : ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಬುಧವಾರ ಭಾರೀ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಸೇರಿದಂತೆ ಹಲವು ಹಿರಿಯ ಸೇನಾ ಅಧಿಕಾರಿಗಳು ಹೆಲಿಕಾಪ್ಟರ್‌ನಲ್ಲಿದ್ದರು. ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಈ ಹೆಲಿಕ್ಯಾಪ್ಟರ್ ನಲ್ಲಿ ಹೊರಟಿದ್ದರು. ಈ ಬಗ್ಗೆ ಭಾರತೀಯ ವಾಯುಪಡೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /5

ದಟ್ಟ ಮಂಜಿನ ನಡುವೆ ನಂಜಪ್ಪನಛಾತಿರಂ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ.   ಆರಂಭಿಕ ದೃಶ್ಯಗಳಲ್ಲಿ ಹೆಲಿಕಾಪ್ಟರ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ಹೆಲಿಕಾಪ್ಟರ್ ಪತನದ ನಂತರ ಭಾರೀ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ. ಹೆಲಿಕಾಪ್ಟರ್ ಬಿದ್ದ ಪ್ರದೇಶ ಅರಣ್ಯ ಪ್ರದೇಶವಾಗಿದೆ.  

2 /5

ಈ ಬಗ್ಗೆ ಭಾರತೀಯ ವಾಯುಪಡೆ ಟ್ವೀಟ್ ಮಾಡಿದ್ದು, 'ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿದ್ದ ಭಾರತೀಯ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್ ತಮಿಳುನಾಡಿನ ಕೂನೂರು ಬಳಿ ಪತನಗೊಂಡಿದೆ. ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.  

3 /5

ಪೊಲೀಸ್ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಹೆಲಿಕಾಪ್ಟರ್ ಭಾರತೀಯ ವಾಯುಪಡೆಯ ಸೂಲೂರು ನೆಲೆಯಿಂದ ವೆಲ್ಲಿಂಗ್ಟನ್‌ನ ಡಿಫೆನ್ಸ್ ಸರ್ವಿಸಸ್ ಕಾಲೇಜಿಗೆ) ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.  

4 /5

ತಮಿಳುನಾಡಿನ ನೀಲಗಿರಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿಗೆ ಮಾಹಿತಿ ನೀಡಲಿದ್ದಾರೆ.  

5 /5

ಮೂಲಗಳ ಪ್ರಕಾರ, ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಸೇನೆಯ 9 ಅಧಿಕಾರಿಗಳು ಈ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಇದ್ದರು. ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಸಿಡಿಎಸ್ ಜನರಲ್ ಬಿಪಿನ್ ರಾವತ್ ಅಪಘಾತದ ನಂತರ ಆರೋಗ್ಯವಾಗಿದ್ದಾರೆ ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ 5 ಮೃತದೇಹಗಳು ಪತ್ತೆಯಾಗಿವೆ.