Asia Cup 2022: ಅತಿ ಹೆಚ್ಚು ವಿಕೆಟ್ ಪಡೆದ 5 ಬೌಲರ್‌ಗಳಲ್ಲಿ ಈ ಮಾರಕ ಭಾರತೀಯ ಬೌಲರ್ ನಂಬರ್ ಒನ್
ಟಿ20 ಕ್ರಿಕೆಟ್‌ನಲ್ಲಿ ಬೌಲಿಂಗ್‌ನಲ್ಲಿ ಭುವನೇಶ್ವರ್ ಕುಮಾರ್ ಪರಿಣಿತ ಆಟಗಾರ. ಭಾರತದ ಸ್ಟಾರ್ ಬೌಲರ್ ಭುವನೇಶ್ವರ್ ಕುಮಾರ್ ಏಷ್ಯಾಕಪ್ 2022 ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಅವರು 5 ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಪಡೆದು ನಂಬರ್ ಒನ್ ಸ್ಥಾನದಲ್ಲಿದ್ದಾರೆ.
ವನಿಂದು ಹಸರಂಗಾ ಅವರು ಶ್ರೀಲಂಕಾ ತಂಡಕ್ಕೆ ಏಕಾಂಗಿಯಾಗಿ ಅಂತಿಮ ಪ್ರಶಸ್ತಿಯನ್ನು ಗೆದ್ದುಕೊಟ್ಟ ಕೀರ್ತಿಗೆ ಪಾತ್ರರಾಗಿದ್ದಾರೆ. ಇವರು 17ನೇ ಓವರ್‌ನಲ್ಲಿ ಪಾಕಿಸ್ತಾನದ ವಿರುದ್ಧ ಅದ್ಭುತವಾಗಿ ಬೌಲಿಂಗ್ ಮಾಡಿದರು. ಅವರು ಒಂದೇ ಓವರ್‌ನಲ್ಲಿ ಮೂರು ವಿಕೆಟ್ ಪಡೆದರು. ಏಷ್ಯಾಕಪ್ 2022 ರಲ್ಲಿ, ವನಿಂದು ಹಸರಂಗ 6 ಪಂದ್ಯಗಳಲ್ಲಿ 9 ವಿಕೆಟ್ ಪಡೆದರು.
2022ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ಮೊಹಮ್ಮದ್ ನವಾಜ್ ಅಬ್ಬರಿಸಿದ್ದರು. ಭಾರತದ ವಿರುದ್ಧ 42 ರನ್‌ಗಳ ಇನ್ನಿಂಗ್ಸ್ ಕೂಡ ಆಡಿದ್ದರು. ಇದಲ್ಲದೇ 6 ಪಂದ್ಯಗಳಲ್ಲಿ ಬೌಲಿಂಗ್ ಮಾಡಿ 8 ವಿಕೆಟ್ ಪಡೆದಿದ್ದಾರೆ.
ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ಬೌಲರ್‌ಗಳು ಅದ್ಭುತ ಆಟ ಪ್ರದರ್ಶಿಸಿದರು. ಯುಎಇ ಪಿಚ್‌ಗಳು ಯಾವಾಗಲೂ ಸ್ಪಿನ್ನರ್‌ಗಳಿಗೆ ಸಹಾಯ ಮಾಡುತ್ತವೆ. ಶಾದಾಬ್ ಖಾನ್ ಈ ಪಿಚ್‌ಗಳ ಸಂಪೂರ್ಣ ಲಾಭ ಪಡೆದರು. ಪಾಕ್ ಪರ 5 ಪಂದ್ಯಗಳಲ್ಲಿ 8 ವಿಕೆಟ್ ಕಬಳಿಸಿದ್ದಾರೆ.
ಪಾಕಿಸ್ತಾನದ ಹ್ಯಾರಿಸ್ ರೌಫ್ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ತಂಡದ ಪರ ಆಡಿದ 6 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ.