Donation Tips: ಹಿಂದೂ ಧರ್ಮ ಶಾಸ್ತ್ರಗಳಲ್ಲಿ ದಾನಕ್ಕೆ ವಿಶೇಷ ಮಹತ್ವವನ್ನು ನೀಡಲಾಗಿದೆ. ದಾನ ಮಾಡುವುದು ಪುಣ್ಯದ ಕೆಲಸ ಎಂದು ಬಣ್ಣಿಸಲಾಗಿದೆ. ದಾನ ಮಾಡುವುದರಿಂದ ದೇವರ ಅನುಗ್ರಹ ಸದಾ ನಮ್ಮ ಮೇಲಿರುತ್ತದೆ ಮತ್ತು ವ್ಯಕ್ತಿ ಪ್ರತಿ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಾನೆ ಎಂದು ಹೇಳಲಾಗುತ್ತದೆ.
Donation Tips: ಹಿಂದೂ ಧರ್ಮ ಶಾಸ್ತ್ರಗಳಲ್ಲಿ ದಾನಕ್ಕೆ ವಿಶೇಷ ಮಹತ್ವವನ್ನು ನೀಡಲಾಗಿದೆ. ದಾನ ಮಾಡುವುದು ಪುಣ್ಯದ ಕೆಲಸ ಎಂದು ಬಣ್ಣಿಸಲಾಗಿದೆ. ದಾನ ಮಾಡುವುದರಿಂದ ದೇವರ ಅನುಗ್ರಹ ಸದಾ ನಮ್ಮ ಮೇಲಿರುತ್ತದೆ ಮತ್ತು ವ್ಯಕ್ತಿ ಪ್ರತಿ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಾನೆ ಎಂದು ಹೇಳಲಾಗುತ್ತದೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿಯು ಯಾವಾಗಲೂ ಎಚ್ಚರಿಕೆಯಿಂದ ದಾನ ಮಾಡಬೇಕು ಎಂದು ಹೇಳಲಾಗಿದೆ. ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ವ್ಯಕ್ತಿಗೆ ಪುಣ್ಯ ಪ್ರಾಪ್ತಿಯ ಬದಲು ಪಾಪಕ್ಕೆ ತಳ್ಳುತ್ತವೆ ಎಂದು ಹೇಳಲಾಗಿದೆ. ಆ ವಸ್ತುಗಳು ಯಾವುವು ತಿಳಿಯೋಣ ಬನ್ನಿ.
ಇದನ್ನೂ ಓದಿ-Itchy Palm Meaning: ಕೈಯಲ್ಲಿ ತುರಿಕೆಯಾದರೆ ನಿಜವಾಗಲೂ ಹಣ ಸಿಗುತ್ತಾ? ಏನ್ ಹೇಳುತ್ತೆ ಶಾಸ್ತ್ರ?
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಜ್ಯೋತಿಷ್ಯ ಶಾಸ್ತ್ರದಲ್ಲಿ, ಕಬ್ಬಿಣವನ್ನು ದಾನ ಮಾಡುವ ಮೂಲಕ, ಒಬ್ಬ ವ್ಯಕ್ತಿಯು ಸಾಕಷ್ಟು ತೊಂದರೆಗಳನ್ನು ಮೈಮೇಲೆ ಎಳೆದುಕೊಳ್ಳುತ್ತಾನೆ ಎನ್ನಲಾಗಿದೆ. ಇದರಿಂದ ವ್ಯಕ್ತಿ ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ. ಕಬ್ಬಿಣದ ವಸ್ತುಗಳನ್ನು ದಾನ ಮಾಡುವ ಮೂಲಕ ವ್ಯಕ್ತಿ ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಕಬ್ಬಿಣದ ಸಂಬಂಧವನ್ನು ಶನಿದೇವನೊಂದಿಗೆ ಜೋಡಿಸಲಾಗಿದೆ. ಶನಿ ದೇವರು ಕಬ್ಬಿಣದಲ್ಲಿ ನೆಲೆಸಿದ್ದಾನೆ. ಕಬ್ಬಿಣದ ವಸ್ತುಗಳನ್ನು ಯಾರಿಗಾದರೂ ದಾನ ಮಾಡಿದರೆ ಶನಿದೇವನಿಗೆ ಕೋಪ ಬರುತ್ತದೆ ಎಂದು ಹೇಳಲಾಗುತ್ತದೆ.
ವೈದಿಕ ಗ್ರಂಥಗಳ ಪ್ರಕಾರ, ಕಪ್ಪು ಎಳ್ಳು ನೇರವಾಗಿ ರಾಹು ಮತ್ತು ಕೇತುಗಳಿಗೆ ಸಂಬಂಧಿಸಿದೆ. ಇದರೊಂದಿಗೆ ಶನಿದೇವನೊಂದಿಗೂ ಕೂಡ ಕಪ್ಪು ಎಳ್ಳಿನ ಸಂಬಂಧ ಕಲ್ಪಿಸಲಾಗಿದೆ. ಬಿಳಿ ಎಳ್ಳಿನ ದಾನದ ವಿಶೇಷ ಮಹತ್ವವನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಆದರೆ ಕಪ್ಪು ಎಳ್ಳನ್ನು ದಾನ ಮಾಡುವುದನ್ನು ನಿಷಿದ್ಧ ಎಂದು ಹೇಳಲಾಗಿದೆ. ಕಪ್ಪು ಎಳ್ಳನ್ನು ದಾನ ಮಾಡುವುದರಿಂದ ವ್ಯಕ್ತಿಯ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಇದರೊಂದಿಗೆ, ವ್ಯಕ್ತಿಯು ಆರ್ಥಿಕ ಬಿಕ್ಕಟ್ಟನ್ನು ಸಹ ಎದುರಿಸಬೇಕಾಗುತ್ತದೆ.
ಉಪ್ಪನ್ನು ದಾನ ಮಾಡುವುದರಿಂದ ವ್ಯಕ್ತಿ ಸಾಲಬಾಧೆ ಎದುರಿಸುತ್ತಾನೆ ಎಂದು ಹೇಳಲಾಗಿದೆ. ಯಾವುದೇ ನಿರ್ಗತಿಕರಿಗೆ ಉಪ್ಪನ್ನು ದಾನ ಮಾಡಬೇಡಿ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಉಪ್ಪನ್ನು ದಾನ ಮಾಡುವುದರಿಂದ ವ್ಯಕ್ತಿ ಶನಿಯ ಸಾಡೆಸತಿ ಎದುರಿಸಬೇಕಾಗುತ್ತದೆ. ಅಲ್ಲದೆ, ವ್ಯಕ್ತಿಯು ಕ್ರಮೇಣ ಸಾಲದಲ್ಲಿ ಮುಳುಗುತ್ತಾನೆ ಎನ್ನಲಾಗಿದೆ .
ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ವ್ಯಕ್ತಿಯು ವಿಶೇಷ ಫಲವನ್ನು ಪಡೆಯುತ್ತಾನೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಅದೇ ರೀತಿ, ಕೆಲವು ವಸ್ತುಗಳ ದಾನವು ವ್ಯಕ್ತಿಯನ್ನು ತೊಂದರೆಗೆ ಸಿಲುಕಿಸುತ್ತದೆ. ಇಂತಹುದೇ ವಸ್ತುಗಳಲ್ಲಿ ಬೆಂಕಿ ಪೊಟ್ಟಣ ಕೂಡ ಒಂದು. ಅಪ್ಪಿತಪ್ಪಿಯೂ ಯಾರಿಗೂ ಕೂಡ ಬೆಂಕಿಕಡ್ಡಿಗಳನ್ನು ದಾನವಾಗಿ ಕೊಡಬೇಡಿ. ಏಕೆಂದರೆ ಇದರಿಂದ ಸಂಸಾರದ ನೆಮ್ಮದಿ ಹಾಳಾಗುತ್ತದೆ ಎಂಬ ಮಾತಿದೆ. ಮತ್ತು ಯಾವುದೇ ಕಾರಣವಿಲ್ಲದೆ ಕುಟುಂಬದಲ್ಲಿ ಜಗಳಗಳು ನಡೆಯುತ್ತವೆ.