Astro Tips For Money: ಹಣಕಾಸಿನ ಬಿಕ್ಕಟ್ಟಿನಿಂದ ಹೊರಬರಲು ಇಂದೇ ಮಾಡಿ ತುಳಸಿ ಪರಿಹಾರ
ಹಿಂದೂ ಧರ್ಮದಲ್ಲಿ ತುಳಸಿ ಸಸ್ಯವನ್ನು ಪವಿತ್ರ ಪೂಜನೀಯ ಸಸ್ಯವೆಂದು ಪರಿಗಣಿಸಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ತುಳಸಿ ಸಸ್ಯದಲ್ಲಿ ಸಂಪತ್ತಿನ ಅಧಿದೇವತೆಯಾದ ತಾಯಿ ಮಹಾಲಕ್ಷ್ಮೀ ನೆಲೆಸಿರುತ್ತಾಳೆ ಎಂದು ಹೇಳಲಾಗುತ್ತದೆ. ಜೀವನದಲ್ಲಿ ಸುಖ-ಶಾಂತಿ-ಸಮೃದ್ಧಿಯನ್ನು ಪಡೆಯಲು ತುಳಸಿಗೆ ಸಂಬಂಧಿಸಿದ ಕೆಲವು ಪರಿಹಾರಗಳು ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು ಎನ್ನಲಾಗುತ್ತದೆ. ಅವುಗಳೆಂದರೆ...
ತುಳಸಿ ಪೂಜೆ ಮಾಡುವುದರಿಂದ ಅಂತಹ ಮನೆಯಲ್ಲಿ ಧನಾತ್ಮಕ ಶಕ್ತಿ ಪ್ರವೇಶಿಸುತ್ತದೆ. ತುಳಸಿ ಪೂಜೆಯಲ್ಲಿ ತುಳಸಿ ಮಾತೆಗೆ ನೇವೇದ್ಯ ಮಾಡುವುದರಿಂದ ಅಂತಹ ಮನೆಯಲ್ಲಿ ಸಂಪತ್ತಿನ ಸುರಿಮಳೆಯಾಗಲಿದೆ ಎಂದು ಹೇಳಲಾಗುತ್ತದೆ.
ಧಾರ್ಮಿಕ ನಂಬಿಕೆಗಳ ಪ್ರಕಾರ, ತುಳಸಿ ಉಪಸ್ಥಿತಿಯಿಲ್ಲದೆ ಭಗವಾನ್ ಶ್ರೀ ಹರಿಯು ನೇವೇದ್ಯವನ್ನು ಸ್ವೀಕರಿಸುವುದಿಲ್ಲ ಎನ್ನಲಾಗುತ್ತದೆ. ಹಾಗಾಗಿ, ಮನಃಪೂರ್ವಕವಾಗಿ ತುಳಸಿ ಮಾತೆಯನ್ನು ಪೂಜಿಸಿದರೆ ಅಂತಹ ಮನೆಯಲ್ಲಿ ಎಂದಿಗೂ ದಾರಿದ್ರ್ಯ ಕಾಡುವುದಿಲ್ಲ ಎನ್ನಲಾಗುತ್ತದೆ.
ತುಳಸಿ ಸಸ್ಯಕ್ಕೆ ನಿಯಮಿತವಾಗಿ ನೀರನ್ನು ಅರ್ಪಿಸುವುದರಿಂದ ಜೀವನದಲ್ಲಿ ಎದುರಾಗಿರುವ ನಾನಾ ರೀತಿಯ ಸಂಕಷ್ಟಗಳಿಂದ ಪರಿಹಾರವನ್ನು ಪಡೆಯಬಹುದು ಎಂದು ನಂಬಲಾಗಿದೆ.
ನಿಯಮಿತವಾಗಿ ತುಳಸಿ ಸಸ್ಯಕ್ಕೆ ನೀರು ಅರ್ಪಿಸುವುದರಿಂದ ಅಂತಹ ಮನೆಯಲ್ಲಿ ನಕಾರಾತ್ಮಕ ಶಕ್ತಿ ನಿವಾರಣೆಯಾಗಿ ಜೀವನದಲ್ಲಿ ಸಕಾರಾತ್ಮಕತೆ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತುಳಸಿ ಸಸ್ಯಕ್ಕೆ ನೀರು ಅರ್ಪಿಸುವಾಗ 11 ಬಾರಿ 'ಓಂ ಸುಭದ್ರಾಯ ನಮಃ' ಎಂದು ಜಪಿಸಿದರೆ ನಿಮ್ಮ ಜೀವನದಲ್ಲಿ ಎದುರಾಗಿರುವ ಹಣಕಾಸಿನ ಸಮಸ್ಯೆಗಳಿಂದ ಶೀಘ್ರದಲ್ಲೇ ಪರಿಹಾರವನ್ನು ಪಡೆಯಬಹುದು ಎಂಬ ನಂಬಿಕೆಯಿದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.