Astro Tips: ಸರ್ವಾರ್ಥ ಸಿದ್ಧಿ ಯೋಗದಿಂದ ಈ 5 ರಾಶಿಯವರು ಅಪಾರ ಸುಖ-ಸಂಪತ್ತು ಸಿಗಲಿದೆ!

Tue, 10 Sep 2024-11:03 pm,

ಮೇಷ ರಾಶಿಯವರಿಗೆ ಈ ದಿನ ಯಶಸ್ಸನ್ನು ತರುತ್ತದೆ. ತಾಯಿ ಲಕ್ಷ್ಮಿದೇವಿಯ ಕೃಪೆಯಿಂದ ಮೇಷ ರಾಶಿಯವರಿಗೆ ಕಷ್ಟಗಳು ಕಡಿಮೆಯಾಗುತ್ತವೆ. ನಿಮಗೆ ಆರ್ಥಿಕ ಲಾಭವಾಗುವ ಸಾಧ್ಯತೆಯಿದೆ. ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಸಾಗುತ್ತವೆ. ಇದರಿಂದ ನೀವು ಸಂತೋಷ ಅನುಭವಿಸುವಿರಿ. ನಿಮ್ಮ ಕಠಿಣ ಪರಿಶ್ರಮದ ಫಲಿತಾಂಶ ಪಡೆಯುತ್ತೀರಿ. ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಇದು ನಿಮಗೆ ಶುಭ ದಿನವಾಗಿರುತ್ತದೆ. ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸಲು ಸಾಧ್ಯವಾಗುತ್ತದೆ. ಇದು ನಿಮ್ಮ ಪ್ರಗತಿಗೆ ಕಾರಣವಾಗುತ್ತದೆ. ನಿಮ್ಮ ಕುಟುಂಬದಲ್ಲಿನ ಸಮಸ್ಯೆಗಳು ಕೊನೆಗೊಳ್ಳುತ್ತದೆ.  

ಈ ದಿನ ಕನ್ಯಾ ರಾಶಿಯವರಿಗೆ ತುಂಬಾ ವಿಶೇಷವಾಗಿರುತ್ತದೆ. ಈ ರಾಶಿಯವರು ಅತ್ಯಂತ ಕಷ್ಟಕರ ಕಾರ್ಯಗಳನ್ನು ಪೂರ್ಣಗೊಳಿಸುವ ಶಕ್ತಿ ಪಡೆಯುತ್ತಾರೆ. ಕಠಿಣ ಪರಿಶ್ರಮವು ಅವರ ಕೈ ಹಿಡಿಯಲಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೀರಿ. ಮಂಗಳವಾರ ಉಪವಾಸ ಆಚರಿಸಿದರೆ ತುಂಬಾ ಒಳ್ಳೆಯದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಅಧಿಕ ಲಾಭ ಪಡೆಯುವ ಸಾಧ್ಯತೆಯಿದೆ. ನಿಮ್ಮ ಪಾಲುದಾರರೊಂದಿಗೆ ನಿಮ್ಮ ಸಂಬಂಧ ಉತ್ತಮವಾಗಿರುತ್ತದೆ. ಮಕ್ಕಳಿಂದ ಮನೆಯಲ್ಲಿ ಉತ್ತಮ ವಾತಾವರಣ ಇರುತ್ತದೆ. ಸಂಗಾತಿಯೊಂದಿಗೆ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ. 

ತುಲಾ ರಾಶಿಗೆ ಇದು ಭಯಮುಕ್ತ ದಿನವಾಗಿರುತ್ತದೆ. ಹನುಮಂತನ ಆಶೀರ್ವಾದದಿಂದ ತುಲಾ ರಾಶಿಯವರ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. ನೀವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಬಲ ಪಡೆಯುತ್ತೀರಿ. ನೀವು ವ್ಯವಹಾರದಲ್ಲಿ ಅಧಿಕ ಲಾಭ ಪಡೆಯುವ ಸಾಧ್ಯತೆಗಳಿವೆ. ನೀವು ಎಲ್ಲಾ ಯೋಜನೆಗಳು ಯಶಸ್ವಿಯಾಗುತ್ತದೆ. ಅದೃಷ್ಟವು ನಿಮ್ಮ ಕೈಹಿಡಿಯಲಿದೆ. ಹೀಗಾಗಿ ನೀವು ಮಾಡುವ ಕಾರ್ಯಗಳು ಯಶಸ್ವಿಯಾಗುತ್ತವೆ. ಇದರಿಂದ ನೀವು ಮಾನಸಿಕವಾಗಿ ಒತ್ತಡದಿಂದ ಮುಕ್ತರಾಗುತ್ತೀರಿ.

ಈ ದಿನ ಮಕರ ರಾಶಿಗೆ ಮಂಗಳಕರ ದಿನವಾಗಿರುತ್ತದೆ. ವ್ಯವಹಾರದಲ್ಲಿ ಲಾಭದಾಯಕ ಮಾರ್ಗ ಕಂಡುಕೊಳ್ಳುವಿರಿ. ನೀವು ಅಂದುಕೊಂಡ ಕಾರ್ಯಗಳು ಅದೃಷ್ಟ ತಂದುಕೊಡಲಿವೆ. ಕೆಲಸದಲ್ಲಿ ಧನಲಾಭ ಇರಲಿದೆ. ಹಣ ಗಳಿಸುವ ಹಲವಾರು ಮಾರ್ಗ ಕಂಡುಕೊಳ್ಳುವಿರಿ. ಹೂಡಿಕೆ ಮಾಡಿದ್ದರೆ ನಿಮಗೆ ಉತ್ತಮ ಲಾಭ ಸಿಗಲಿದೆ. ಮನೆಯಲ್ಲಿ ಸಂತೋಷ-ಶಾಂತಿ ನೆಲೆಸಲಿದೆ. ನಿಮ್ಮ ಕಠಿಣ ಪರಿಶ್ರಮದಿಂದ ನೀವು ಅಂದುಕೊಂಡ ಕಾರ್ಯಗಳು ಕೈಹಿಡಿಯಲಿದೆ. ನಿಮ್ಮ ಶ್ರಮಕ್ಕೆ ತಕ್ಕ ಫಲವನ್ನು ಶನಿದೇವರು ಕರುಣಿಸಲಿದ್ದಾನೆ. ಈ ಸಮಯದಲ್ಲಿ ನೀವು ಆಸ್ತಿ, ಮನೆ ಖರೀದಿ ಬಗ್ಗೆ ಯೋಚಿಸಬಹುದು.

ಕುಂಭ ರಾಶಿಯವರಿಗೆ ಈ ದಿನ ತುಂಬಾ ಶುಭವಾಗಲಿದೆ. ಕುಟುಂಬದಲ್ಲಿನ ಹಿರಿಯರ ಆಶೀರ್ವಾದ ನಿಮ್ಮ ಮೇಲಿರಲಿದೆ. ಕೈಗೊಂಡ ಕಾರ್ಯಗಳಲ್ಲಿ ಭರ್ಜರಿ ಲಾಭ ಇರಲಿದೆ. ಶತ್ರುಗಳಿಂದ ನಿಮಗೆ ಮುಕ್ತಿ ದೊರೆಯಲಿದೆ. ನಿಮ್ಮೊಂದಿಗೆ ಅದೃಷ್ಟ ಲಕ್ಷ್ಮಿ ಇರಲಿದ್ದು, ನಿಮ್ಮ ಎಲ್ಲಾ ಕಾರ್ಯಗಳು ಕೈ ಹಿಡಿಯಲಿವೆ. ಶೀಘ್ರವೇ ನೀವು ಒಳ್ಳೆಯ ಸುದ್ದಿ ಪಡೆಯುತ್ತೀರಿ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link