ಈ ಸರ್ಕಾರಿ ಯೋಜನೆಯಲ್ಲಿ ಕೇವಲ 7 ರೂ. ಉಳಿಸಿ, ತಿಂಗಳಿಗೆ 5000 ರೂ. ಪಡೆಯಿರಿ...!
ವೃದ್ಧಾಪ್ಯವನ್ನು ಸುರಕ್ಷಿತವಾಗಿಸಲು ನೀವು ಸರ್ಕಾರೀ ಯೋಜನೆಗಳಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಅಟಲ್ ಪಿಂಚಣಿ ಯೋಜನೆ (APY) ನಿಮಗೆ ಅತ್ಯುತ್ತಮ ಯೋಜನೆಯಾಗಿದೆ.
ಕೇಂದ್ರ ಸರ್ಕಾರದ ಯೋಜನೆಯಾಗಿರುವ ಅಟಲ್ ಪಿಂಚಣಿ ಯೋಜನೆಯಲ್ಲಿ ಪ್ರತಿ ನಿತ್ಯ ಕೇವಲ 7 ರೂ. ಉಳಿಸಿ (ತಿಂಗಳಿಗೆ 210 ರೂ.) ವೃದ್ಧಾಪ್ಯದಲ್ಲಿ ಪ್ರತಿ ತಿಂಗಳು 5000 ರೂ. ಪಿಂಚಣಿ ಪಡೆಯಬಹುದು.
ಅಟಲ್ ಪಿಂಚಣಿ ಯೋಜನೆಯು ಪ್ರಮುಖವಾಗಿ ಖಾಸಗಿ ವಲಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯಲ್ಲಿ ನಿಮ್ಮ ಪಿಂಚಣಿ ಮೊತ್ತವು ನಿಮ್ಮ ಹೂಡಿಕೆಯನ್ನು ಅವಲಂಬಿಸಿರುತ್ತದೆ.
ಅಟಲ್ ಪಿಂಚಣಿ ಯೋಜನೆಯು ವೃದ್ದಾಪ್ಯದಲ್ಲಿ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಹೂಡಿಕೆದಾರರು ಸಾವನ್ನಪ್ಪಿದರೆ ಅವರ ಸಂಗಾತಿಗೆ ಪಿಂಚಣಿ ದೊರೆಯುತ್ತದೆ.
ಅಟಲ್ ಪಿಂಚಣಿ ಯೋಜನೆಯಲ್ಲಿ ನೋಂದಾಯಿಸುವುದು ಕೂಡ ತುಂಬಾ ಸುಲಭವಾಗಿದೆ. ಈ ಯೋಜನೆಯಲ್ಲಿ ನೋಂದಾಯಿಸಲು ಬಯಸುವವರು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಮತ್ತು ಆ ಖಾತೆ ಆಧಾರ್ ಸಂಖ್ಯೆಗೆ ಲಿಂಕ್ ಆಗಿರಬೇಕು. ಆನಂತರ ಅಗತ್ಯ ದಾಖಲೆಗಳನ್ನು ಒದಗಿಸಿ ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಬಹುದು.